ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ 2002ರ ಹಿಟ್ ಅಂಡ್ ರನ್ ಪ್ರಕರಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಈ ಹಿಂದೆ ಸಲ್ಮಾನ್ ಖಾನ್ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ್ದ ಮುಂಬೈ ನ್ಯಾಯಾಲಯ, ಸಲ್ಮಾನ್ ಖಾನ್‌ರನ್ನು ದೋಷಮುಕ್ತಗೊಳಿಸಿ ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಇದೀಗ ಬಾಂಬೇ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ರಜಾಕಾಲೀನ ಮನವಿ(ಎಸ್‌ಎಲ್‌ಪಿ) ಸಲ್ಲಿಸಿದೆ. ಕಳೆದ ಡಿಸೆಂಬರ್ 10ರಂದು ನ್ಯಾಯಮೂರ್ತಿ ಎ.ಆರ್. ಜೋಷಿ ಸಲ್ಮಾನ್ ಖಾನ್‌ರನ್ನು ಆರೋಪ ಮುಕ್ತಗೊಳಿಸಿದ್ದರು.
ನಿಯಮಗಳ ಪ್ರಕಾರ ತೀರ್ಪು ನೀಡಿದ 90 ದಿನಗಳ ಒಳಗೆ ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಅವಕಾಶವಿರುತ್ತದೆ.