ಮಕ್ಕಳೊಂದಿಗೆ ಪ್ರಧಾನಿ ಮೋದಿ(ಸಂಗ್ರಹ ಚಿತ್ರ) 
ದೇಶ

ಬಾಲಕರನ್ನು ಬಳಸಿ ಮೋದಿ ಮೇಲೆ ಆತ್ಮಾಹುತಿ ದಾಳಿಗೆ ಇಸೀಸ್ ಸಂಚು!

12 -15 ವರ್ಷದ ಮಕ್ಕಳನ್ನು ಉಪಯೋಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಇಸೀಸ್ ಉಗ್ರ ಸಂಘಟನೆ ಯೋಜಿಸಿದೆ.

ನವದೆಹಲಿ: ಕಳೆದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಭದ್ರತೆಯನ್ನು ಬದಿಗಿರಿಸಿ ಮಕ್ಕಳೊಂದಿಗೆ ಬೆರೆತಿದ್ದರು. ಗಣರಾಜ್ಯೋತ್ಸವ ದಿನದಂದು ಪ್ರಧಾನಿ ಮೋದಿ ಅವರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿರುವ ಇಸೀಸ್ ಉಗ್ರ ಸಂಘಟನೆ ಮೋದಿ ಮಕ್ಕಳೊಂದಿಗೆ ಬೆರೆಯುವುದನ್ನೇ ಬಂಡವಾಳವನ್ನಾಗಿಸಿಕೊಳ್ಳಲು ಯತ್ನಿಸುತ್ತಿದೆ.
 
12 -15 ವರ್ಷದ ಮಕ್ಕಳನ್ನು ಉಪಯೋಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಇಸೀಸ್ ಉಗ್ರ ಸಂಘಟನೆ ಯೋಜಿಸಿದೆ. ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು  12 -15 ವರ್ಷದ ಮಕ್ಕಳಿಗೆ ಶಸ್ತ್ರಾಸ್ತ್ರ ಬಳಕೆ ಮತ್ತು ಬಾಂಬ್ ಉಪಯೋಗಿಸುವ ತರಬೇತಿ ನೀಡಲಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಮೋದಿ ಅವರ ಭದ್ರತೆಯನ್ನು ಹೆಚ್ಚಿಸಲು ಪೊಲೀಸರು, ವಿಶೇಷ ರಕ್ಷಣಾ ದಳ (ಎಸ್​ಪಿಜಿ) ಮತ್ತು ಎನ್​ಸಿಆರ್ ಪಡೆಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.     

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT