ದೇಶ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಶಿಫಾರಸು

Srinivas Rao BV

ನವದೆಹಲಿ: ಅರುಣಾಚಲಪ್ರದೇಶದಲ್ಲಿ ಅಸ್ಥಿರತೆ ಎದುರಾಗಿರುವುದರಿಂದ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದ್ದು, ಈ ಸಂಬಂಧ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.
ಜ.24 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ಕೆಲವು ವರದಿಗಳ ಪ್ರಕಾರ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವುದಕ್ಕೂ ಮುನ್ನ ರಾಜ್ಯ ಸರ್ಕಾರವೇ ವಿಧಾನಸಭೆ ವಿಸರ್ಜನೆ ಮಾಡಲಿದೆ ಎಂದು ಹೇಳಲಾಗುತ್ತಿದೆ.
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದು, ಪಕ್ಷದಲ್ಲಿ ಭಿನ್ನಾಭಿಪ್ರಾಯ ತಲೆದೋರಿ, ಬಂಡಾಯವೆದ್ದಿರುವ ನಾಯಕರು ಹಾಗೂ ಬಿಜೆಪಿ ನಾಯಕರು ಡಿಸೆಂಬರ್ ನಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಅವಿಶ್ವಾಸ ನಿರ್ಣಯದಲ್ಲಿ ಕಾಂಗ್ರೆಸ್ ಸರ್ಕಾರ ಸೋತ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಅಸ್ಥಿರತೆ ಉಂಟಾಗಿದ್ದು ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡುವ ಸ್ಥಿತಿ ಎದುರಾಗಿದೆ. 60 ವಿಧಾನಸಭಾ ಸದಸ್ಯರನ್ನು ಹೊಂದಿರುವ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಬಂ ಟುಕಿ 26 ಸದಸ್ಯರ ಬೆಂಬಲ ಹೊಂದಿದ್ದಾರೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಲು ಬಿಜೆಪಿ ಏಜೆಂತರಂತೆ ವರ್ತಿಸುತ್ತಿರುವ ರಾಜ್ಯಪಾಲರೇ ಕಾರಣ ಎಂದು ಟುಕಿ ದೂರಿದ್ದಾರೆ.

SCROLL FOR NEXT