ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿರುವ ಕೇಂದ್ರ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಪ್ರತಿಪಕ್ಷ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
'ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಮಾಡಿರುವ ಶಿಫಾರಸನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ' ಎಂದು ಕಾಂಗ್ರೆಸ್ ನಾಯಕ ಹಾಗೂ ಹಿರಿಯ ವಕೀಲ ವಿವೇಕ್ ಟಂಖ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಮುಖ್ಯ ಸಚೇತಕ ಬಮಂಗ್ ಫೆಲಿಕ್ಸ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ಮಾಡುವಂತೆ ಮನವಿ ಮಾಡಿರುವುದಾಗಿ ವಿವೇಕ್ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದೆ. ಆದರೆ ಕೇಂದ್ರ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್, ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಬಹುಮತವಿದೆ. ಪ್ರಧಾನಿ ನರೇಂದ್ರ ಮೋದಿ, ಅರುಣಾಚಲ ಪ್ರದೇಶದ ಬಿಜೆಪಿ ನಾಯಕರು ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics