ದೇಶ

25 ವರ್ಷಗಳ ಹಿಂದೆ ಕರಸೇವಕರಿಗೆ ಗುಂಡಿಕ್ಕಲು ಆದೇಶ ನೀಡಿದ್ದಕ್ಕೆ ಬೇಸರವಾಗುತ್ತಿದೆ: ಮುಲಾಯಂ ಸಿಂಗ್

Srinivas Rao BV

ಲಖನೌ:ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ 25 ವರ್ಷಗಳ ಹಿಂದಿನ ಘಟನೆಗೆ ಈಗ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸಗೊಂಡ ವರ್ಷ1990 ರಲ್ಲಿ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಸಿಎಂ ಆದೇಶದಿಂದ ನಡೆದ ಗುಂಡಿನ ದಾಳಿಗೆ 16 ಮಂದಿ ಬಲಿಯಾಗಿದ್ದರು. ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡಿಕ್ಕಲು ಆದೇಶ ನೀಡಿದ್ದಕ್ಕೆ ಬೇಸರವಾಗುತ್ತಿದೆ. ಅದರೆ ಧಾರ್ಮಿಕ ಸ್ಥಳ(ಬಾಬ್ರಿ ಮಸೀದಿ)ವನ್ನು ಉಳಿಸಲು ಇಂತಹ ಕಠಿಣ ನಿರ್ಧಾರ ಕೈಗೊಳ್ಳಬೇಕಾದ ಅನಿವಾರ್ಯತೆ ಇತ್ತು ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮುಲಾಯಂ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಹಣ ಲೂಟಿ ಮಾಡುತ್ತಿರುವ ಉತ್ತರ ಪ್ರದೇಶ ಸರ್ಕಾರದ ಸಚಿವರಿಗೆ ಎಚ್ಚರಿಕೆ ನೀಡಿದ್ದು, ಹಣ ಗಳಿಸುವುದೇ ಮುಖ್ಯ ಉದ್ದೇಶವಾಗಿದ್ದರೆ ರಾಜಕೀಯ ಬಿಟ್ಟು ಉದ್ಯಮ ಪ್ರಾರಂಭಿಸಿ ಎಂದು ಹೇಳಿದ್ದಾರೆ.

SCROLL FOR NEXT