ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯ ಮುಖ್ಯ ಅತಿಥಿಯಾಗಿ 3 ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು ಇಂದು ರಾಜ್‌ಘಾಟ್‌ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಸಮಾಧಿಗೆ ಹೂಗುಚ್ಛ ಇರಿಸಿ ಗೌರವ ವಂದನೆ ಸಲ್ಲಿಸಿದರು.
ನಂತರ ಫ್ರಾಂಕೋಯಿಸ್ ಹೊಲಾಂಡೆ ಅವರು ರಾಜ್‌ಘಾಟ್‌ನಲ್ಲಿ ಸಸಿಯೊಂದನ್ನು ನೆಟ್ಟಿದ್ದರು. ಈ ವೇಳೆ ಜತೆಯಲ್ಲಿ ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವಡೇಕರ್ ಸಾಥ್ ನೀಡಿದರು.
ನವದೆಹಲಿಯಲ್ಲಿರುವ ಹೈದರಬಾದ್ ಹೌಸ್ ನಲ್ಲಿ ಉಭಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾಂಕೋಯಿಸ್ ಹೊಲಾಂಡೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಐದನೇ ಬಾರಿಗೆ ಗಣರಾಜ್ಯೋತ್ಸವ ದಿನಾಚರಣೆಯ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷರು ಭಾರತಕ್ಕೆ ಆಗಮಿಸುತ್ತಿರುವುದು.