ಅಮಿತ್ ಶಾ 
ದೇಶ

ಮಮತಾ ಅವಧಿಯಲ್ಲಿ ಬಂಗಾಳ ರಾಷ್ಟ್ರ ವಿರೋಧಿಗಳ ಕೇಂದ್ರ: ಅಮಿತ್ ಶಾ

ತೃಣಮೂಲ ಕಾಂಗ್ರೆಸ್ ಶರಧ ಹಗರಣದಲ್ಲಿ ಹಾಗೂ ಉಗ್ರ ಕೃತ್ಯಗಳಲ್ಲಿ...

ಹೌರಾ: ತೃಣಮೂಲ ಕಾಂಗ್ರೆಸ್ ಶಾರದ ಹಗರಣದಲ್ಲಿ ಹಾಗೂ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಮಮತಾ ಬ್ಯಾನರ್ಜಿ ಆಡಳಿತವಧಿಯಲ್ಲಿ ಪಶ್ಚಿಮ ಬಂಗಾಳ ರಾಷ್ಟ್ರ ವಿರೋಧಿಗಳ ಕೇಂದ್ರ ಸ್ಥಾನವಾಗಿದೆ ಎಂದು ಸೋಮವಾರ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ನಂತರ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಹುಕೋಟಿ ಶಾರದ ಹಗರಣ, ಕಳೆದ ವರ್ಷ ಬುರ್ದ್ವಾನ್‌ನ ಖಗ್ರಗಢ ಮತ್ತು ಮಾಲ್ಡಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
'ಜಗತ್ತು ಮಮತಾ ಅವರನ್ನು ಬೆಂಗಾಳ ಮುಖ್ಯಮಂತ್ರಿ ಎಂದು ಗುರುತಿಸಿದರೆ, ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವವರು ಮಾತ್ರ ಅವರನ್ನು ಒಬ್ಬ ಪೇಂಟರ್ ಎಂದು ಗುರುತಿಸುತ್ತಾರೆ ಮತ್ತು ಅವರ ಪೇಂಟಿಂಗ್‌ಗಳನ್ನು ಕೋಟ್ಯಾಂತರ ರುಪಾಯಿಗೆ ಖರೀದಿಸುತ್ತಾರೆ' ಎಂದು ಶಾ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್