ಸಾಂಕೇತಿಕ ಚಿತ್ರ 
ದೇಶ

ಆಂಧ್ರಪ್ರದೇಶದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಇಲ್ಲಿನ ನೋವಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶನಿವಾರ ತಡರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ...

ವಿಜಯವಾಡ: ಇಲ್ಲಿನ ನೋವಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶನಿವಾರ ತಡರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಶರಣಾಗಿರುವ 22ರ ಹರೆಯದ ಪುವ್ವಾಲ ಪ್ರೇಮ್ ಪ್ರಸಾದ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ಪಾನಿಕ್ಸ್ ವಿಭಾಗದಲ್ಲಿ ನಾಲ್ಕನೇ ವರ್ಷ ವಿದ್ಯಾರ್ಥಿಯಾಗಿದ್ದಾನೆ. ಈತ ಎರಡು ಮತ್ತು ಮೂರನೇ ವರ್ಷದ ಪರೀಕ್ಷೆಯಲ್ಲಿ ಹಲವಾರು ವಿಷಯಗಳಲ್ಲೇ ಅನುತ್ತೀರ್ಣನಾಗಿದ್ದು, ಅದನ್ನು ಪಾಸು ಮಾಡಲಾಗದ ವ್ಯಥೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಪ್ರಸಾದ್ ಸರಿಯಾರಿ ಕಾಲೇಜಿಗೆ ಬರುತ್ತಿರಲಿಲ್ಲ. ಮಾತ್ರವಲ್ಲದೆ ಆತ ಕಳೆದ ವರ್ಷ ಫೇಲಾಗಿದ್ದ ಪರೀಕ್ಷೆಗಳನ್ನು ಮತ್ತೆ ಬರೆದು ಪಾಸಾಗಿರಲಿಲ್ಲ ಎಂದು ನೋವಾ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಜೆ. ಶ್ರೀನಿವಾಸ ರಾವ್ ಹೇಳಿದ್ದಾರೆ.
ನಮಗೆ ಕಾಲೇಜಿನಲ್ಲಿ ಮತ್ತು ಕಾಲೇಜಿನ ಹಾಸ್ಟೆಲ್‌ನಲ್ಲಿ ಏನು ನಡೆಯಿತು ಎಂಬುದು ಗೊತ್ತಿರಲಿಲ್ಲ. ನಮಗೆ ಆಘಾತವಾಗಿದೆ. ಅವನು ತುಂಬಾ ಶ್ರಮಜೀವಿ ಮತ್ತು ಬದುಕಲ್ಲಿ ಸಾಧನೆ ಮಾಡಬೇಕೆಂಬ ಗುರಿ ಹೊಂದಿದ್ದನು. ಎರಡು ದಿನಗಳ ಹಿಂದೆಯಷ್ಟೇ ನನ್ನೊಂದಿಗೆ ಖುಷಿ ಖುಷಿಯಾಗಿ ಕಳೆದಿದ್ದ ಎಂದು ಪ್ರೇಮ್ ಪ್ರಸಾದ್‌ರ ಸಹೋದರ ಪವನ್ ಪ್ರಸಾದ್ ಹೇಳಿದ್ದಾರೆ. 
ಆತ್ಮಹತ್ಯೆಗೆ ಏನು ಕಾರಣ ಎಂಬುದರ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಿಕ್ಕಿಲ್ಲ. ಈತ ಡೆತ್‌ನೋಟ್ ಬರೆದಿಟ್ಟಿಲ್ಲ ಎಂದು ಬಲ್ಲಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!