ರೋಹಿತ್ ವೇಮುಲಾ 
ದೇಶ

ದಲಿತ ವಿದ್ಯಾರ್ಥಿ ಆತ್ಮಹತ್ಯೆ: ಎಸ್‌ಸಿ/ಎಸ್‌ಟಿ ಶಿಕ್ಷಕರಿಂದ ಅಮರಣಾಂತ ಉಪವಾಸ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮತ್ತಷ್ಟು ತೀವ್ರತೆ...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮತ್ತಷ್ಟು ತೀವ್ರತೆ ಪಡೆದುಕೊಳ್ಳುತ್ತಿದ್ದು, ಇದೀಗ ವಿವಿಯ ಎಸ್‌ಸಿ/ಎಸ್‌ಟಿ ಶಿಕ್ಷಕರ ವೇದಿಕೆ ಕುಲಪತಿ ಅಪ್ಪಾ ರಾವ್ ಅವರ ರಾಜಿನಾಮೆಗೆ ಒತ್ತಾಯಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ವಿಪಿನ್ ಶ್ರೀವಾಸ್ತವ ಅವರನ್ನು ಮಧ್ಯಂತರ ಕುಲಪತಿಯಾಗಿ ನೇಮಕ ಮಾಡಿರುವ ಬಗ್ಗೆಯೂ ಆಘಾತ ವ್ಯಕ್ತಪಡಿಸಿರುವ ಎಸ್‌ಸಿ/ಎಸ್‌ಟಿ ವೇದಿಕೆ, ಕಾರ್ಯಕಾರಿ ಪರಿಷತ್‌ನ ಉಪ ಸಮಿತಿಯ ಮುಖ್ಯಸ್ಥರಾಗಿದ್ದ ಶ್ರೀವಾಸ್ತವ ಅವರೇ ರೋಹಿತ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದೆ. ಅಲ್ಲದೆ ಶ್ರೀವಾಸ್ತವ ಅವರು ಈ ಹಿಂದೆ 2008ರಲ್ಲಿ ಮತ್ತೊಬ್ಬ ದಲಿತ ವಿದ್ಯಾರ್ಥಿ ಸೆಂತಿಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಿದೆ.
ಈ ಮುಂಚೆ ರೋಹಿತ್ ಆತ್ಮಹತ್ಯೆ ಪ್ರಕರಣ ಸಂಬಂಧ ವಿವಿ 11 ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!