ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು
ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರು ನಿನ್ನೆ ರಾತ್ರಿ ಫೇಸ್‌ಬುಕ್ ಖಾತೆಗೆ ಗುಡ್ ಬೈ ಹೇಳಿದ್ದಾರೆ.
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಇದು ತಮ್ಮ ಕೊನೆಯ ಫೇಸ್‌ಬುಕ್ ಪೋಸ್ಟ್ ಅಂತಾ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಹೇಳಿಕೊಂಡಿದ್ದಾರೆ.
ಫೇಸ್ ಬುಕ್, ಟ್ವಿಟರ್ ಗಳಲ್ಲಿ ಹಲವು ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೆ. ಈ ಮೂಲಕ ಜ್ಞಾನವನ್ನು ವಿಸ್ತರಿಸಬಹುದು ಎಂದುಕೊಂಡಿದ್ದೆ. ಆದರೆ, ಜ್ಞಾನವನ್ನು ಪಡೆಯುವುದಕ್ಕಿಂತ ಹೆಚ್ಚಾಗಿ, ನನ್ನ ಅಭಿಪ್ರಾಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಾ ಹೋಗುತ್ತಿದೆ. ಅಷ್ಟೇ ಅಲ್ಲದೇ, ನಿಂದನೆಯೂ ಜಾಸ್ತಿ ಆಗಿದೆ ಎಂದು ಕಟ್ಜು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ನನ್ನಲ್ಲಿರುವ ಜ್ಞಾನವನ್ನು ಹಂಚಲು ಮುಂದಾದರೆ, ಅದನ್ನು ಅರ್ಥ ಮಾಡಿಕೊಳ್ಳದಾ ಕೆಲವರು ನಿಂದಿಸುತ್ತಿದ್ದಾರೆ. ಆದರೆ, ಇದರಿಂದ ನನಗೆ ಏನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಫೇಸ್‌ಬುಕ್ ಗೆ ಗುಡ್ ಬೈ ಹೇಳಿದ್ದಾರೆ.
ಮಹಾತ್ಮಾ ಗಾಂಧಿ ಬ್ರಿಟಿಷ್ ಏಜೆಂಟ್ ಮತ್ತು ಸುಭಾಷ್‌ಚಂದ್ರ ಬೋಸ್ ಜಪಾನ್ ಏಜೆಂಟ್ ಎಂದು ಹೇಳುವ ಮೂಲಕ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರು ವಿವಾದಕ್ಕೀಡಾಗಿದ್ದರು.