ನರೇಂದ್ರ ಮೋದಿ 
ದೇಶ

ದೇಶದಲ್ಲಿ ನಾಳೆ ಚುನಾವಣೆ ನಡೆದರೆ ಎನ್ ಡಿಎ ಮೈತ್ರಿಕೂಟಕ್ಕೆ 301 ಸ್ಥಾನ ಖಚಿತ: ಸಮೀಕ್ಷೆ

ನಾಳೆಯೇ ಲೋಕಸಭೆಗೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 301 ಸ್ಥಾನಗಳಲ್ಲಿ ಜಯಭೇರಿ ಗಳಿಸುವ ಸಾಧ್ಯತೆ ಇದೆ

ನವದೆಹಲಿ:  ನಾಳೆಯೇ ಲೋಕಸಭೆಗೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 301 ಸ್ಥಾನಗಳಲ್ಲಿ ಜಯಭೇರಿ ಗಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಸಮೀಕ್ಷೆಯಲ್ಲಿ ಆಡಳಿತಾರೂಢ ಎನ್ ಡಿಎ ಸರ್ಕಾರಕ್ಕಿಂತ ಪ್ರಧಾನಿ ನರೇಂದ್ರ ಮೋದಿಗೆ ಹೆಚ್ಚಿನ ಅಂಕ ಲಭಿಸಿದೆ ಎಂದು ವರದಿ ಹೇಳಿದೆ.

ಎಬಿಪಿ ನ್ಯೂಸ್ ಮತ್ತು ನೀಲ್ಸನ್ ಜಂಟಿಯಾಗಿ ನಡೆಸಿದ ಸಮೀಕ್ಷೆಯ ಪ್ರಕಾರ ಅಭಿಪ್ರಾಯ ವ್ಯಕ್ತಪಡಿಸಿದ ಶೇ.46ರಷ್ಟು ಜನರು ಎನ್ ಡಿಎ ಸರ್ಕಾರದ ಆಡಳಿತವನ್ನು ತುಂಬಾ ಉತ್ತಮ ಹಾಗೂ ಉತ್ತಮ ಎಂಬುದಾಗಿ ಹೇಳಿದ್ದಾರೆ. ಶೇ.54ರಷ್ಟು ಮಂದಿ ನರೇಂದ್ರ ಮೋದಿಗೆ ಉತ್ತಮ ಹಾಗೂ ಅತ್ಯುತ್ತಮ ಎಂಬ ಅಭಿಪ್ರಾಯವನ್ನು ಸಮೀಕ್ಷೆಯಲ್ಲಿ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ನಾಳೆಯೇ ಲೋಕಸಭಾ ಚುನಾವಣೆ ನಡೆದರೆ ಯಾವ ಪಕ್ಷ ಗೆಲ್ಲುತ್ತೆ ಎಂಬ ಅಭಿಪ್ರಾಯವನ್ನು ಸಂಗ್ರಹಿಸಿದ್ದು, ಅದರಲ್ಲಿ ಎನ್ ಡಿಎಗೆ ಶೇ.38ರಷ್ಟು ಮಂದಿ ಒಲವು ವ್ಯಕ್ತಪಡಿಸಿದ್ದು ಸುಮಾರು 301 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇರುವುದಾಗಿ ಹೇಳಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಶೇ.28ರಷ್ಟು ಮತ ಹಂಚಿಕೊಳ್ಳುವ ಮೂಲಕ ಸುಮಾರು 108 ಸ್ಥಾನಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ವಿವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!