ಸಂಚಾರ ನಿಯಮ ಉಲ್ಲಂಘನೆ: ಪೇದೆ ಮೇಲೆ ಹಲ್ಲೆ ಮಾಡಿದ ಯುವತಿ 
ದೇಶ

ಸಂಚಾರ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಪೇದೆ ಮೇಲೆ ಯುವತಿ ಹಲ್ಲೆ

ಸಂಚಾರ ನಿಯಮವನ್ನು ಉಲ್ಲಂಘಿಸಿದ್ದು ಅಲ್ಲದೇ, ಕರ್ತವ್ಯ ನಿರತ ಪೊಲೀಸನೋರ್ವನ ಮೇಲೆ ಯುವತಿಯೊಬ್ಬರು ಹಲ್ಲೆ ನಡೆಸಿ ಬಾಯಿಗೆ ಬಂದಂತೆ ನಿಂದಿಸಿರುವ ಘಟನೆಯೊಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಾಗಾರಂ ಪ್ರದೇಶದಲ್ಲಿ ಬುಧವಾರ ನಡೆದಿದೆ...

ಹೈದರಾಬಾದ್: ಸಂಚಾರ ನಿಯಮವನ್ನು ಉಲ್ಲಂಘಿಸಿದ್ದು ಅಲ್ಲದೇ, ಕರ್ತವ್ಯ ನಿರತ ಪೊಲೀಸನೋರ್ವನ ಮೇಲೆ ಯುವತಿಯೊಬ್ಬರು ಹಲ್ಲೆ ನಡೆಸಿ ಬಾಯಿಗೆ ಬಂದಂತೆ ನಿಂದಿಸಿರುವ ಘಟನೆಯೊಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಾಗಾರಂ ಪ್ರದೇಶದಲ್ಲಿ ಬುಧವಾರ ನಡೆದಿದೆ.

ಬಿ.ಟೆಕ್ ವಿದ್ಯಾರ್ಥಿಯಾಗಿರುವ ಯುವತಿ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಳು. ಈ ವೇಳೆ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದ ಸಹೋದರ ತಪ್ಪು ದಾರಿಯಲ್ಲಿ ವಾಹನದಲ್ಲಿ ಹೋಗುತ್ತಿದ್ದ. ಇದನ್ನು ಕಂಡ ಕರ್ತವ್ಯ ನಿರತ ಪೊಲೀಸನೋರ್ವ ವಾಹನದ ಫೋಟೋವನ್ನು ತೆಗೆದಿದ್ದಾನೆ.

ಪೊಲೀಸ್ ಫೋಟೋ ತೆಗೆಯುವುದನ್ನು ಕಂಡ ಯುವತಿ ತೀವ್ರವಾಗಿ ಕೆಂಡಾಮಂಡಲವಾಗಿದ್ದಾಳೆ. ನಂತರ ಪೊಲೀಸ್ ಜೊತೆ ವಾಗ್ವಾದಕ್ಕಿಳಿದಿದ್ದಾಳೆ. ಮಾತಿನ ಚಕಮಕಿ ವೇಳೆ ಯುವತಿ ಪೇದೆ ಮೇಲೆ ಹಲ್ಲೆ ನಡೆಸಿದ್ದಾಳೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿನಿಸಿದ್ದಾಳೆ. ಈ ಘಟನೆಯ ವೀಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಓಡಾಡುತ್ತಿದ್ದು, ವೀಡಿಯೋವೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರನ್ನು ಹರ್ಶಿತಾ ಹಾಗೂ ಆಕೆಯ ಸಹೋದರ ಸಾಯಿ ಕಿಶೋರ್ ಎಂದು ಹೇಳಲಾಗುತ್ತಿದ್ದು, ಹಲ್ಲೆ ಗೊಳಗಾದ ಪೇದೆಯನ್ನು ವೆಂಕಟೇಶ್ ಯಾದವ್ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಹಲ್ಲೆ ನಡೆಸಿದ ಯುವತಿ ಹಾಗೂ ಆಕೆಯ ಸಹೋದರನ ವಿರುದ್ಧ ಐಪಿಸಿ ಸೆಕ್ಷನ್ 353ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೀಸರ ಪೊಲೀಸ್ ಠಾಣಾಧಿಕಾರಿ ಗುರುವಾ ರೆಡ್ಡಿ ಅವರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!