ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ಈಗಾಗಲೇ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು ಎಂಬ ಕೇಂದ್ರದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮ್ಮತಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿತ್ತು. ಆದರೆ, ಸರ್ಕಾರದ ಆಡಳಿತಕ್ಕೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರ ಮುಂದಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.