ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ: 6 ಬಂಧನ
30 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ...
ಮುಜಾಫರ್ ನಗರ: 30 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.
ನಿನ್ನೆ ಬೆಳಿಗ್ಗೆ ಮಹಿಳೆಯೊಬ್ಬರು ದಿಯೋಬಂದ್ ನಿಂದ ತಮ್ಮ ಹಳ್ಳಿ ಕೊಟ್ವಾಲಿ ಪ್ರದೇಶದಲ್ಲಿರುವ ಬರ್ಕಾಲಿ ಗೆ ಬರುತ್ತಿದ್ದರು. ಈ ವೇಳೆ ಆಕೆಯನ್ನು ಅಡ್ಡಗಟ್ಟಿದ ಯುವಕರ ಗುಂಪೊಂದು ಆಕೆಯನ್ನು ಅಪಹರಿಸಿದೆ. ನಂತರ ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಹೊತ್ತೊಯ್ದ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಅತ್ಯಾಚಾರವೆಸಗಿದ 6 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಲಲಿತ್, ಪಂಕಜ್, ದೀಪಕ್, ತಾರಾ ಚಂದ್, ಸಂಜಯ್ ಹಾಗೂ ಮತ್ತೊಬ್ಬ ಅನಾಮಧೇಯ ವ್ಯಕ್ತಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.