ದೇಶ

ಅಸ್ಸಾಂ ವಿಧಾನಸಭೆ ಚುನಾವಣೆ: ಸರ್ಬಾನಂದ ಸೋನೊವಾಲ್ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ

Lingaraj Badiger
ನವದೆಹಲಿ: ಮುಂಬರುವ ಅಸ್ಸಾಂ ವಿಧಾಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಗುರುವಾರ ಭಾರತೀಯ ಜನತಾ ಪಕ್ಷ ಘೋಷಿಸಿದೆ.
ಇಂದು ದೆಹಲಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಸೋನೊವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸೋನೊವಾಲ್ ಅವರು, ಪಕ್ಷ ನಿರ್ಧಾರ ಖುಷಿ ತಂದಿದೆ. ಈ ಸಂಬಂಧ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.
SCROLL FOR NEXT