ನವದೆಹಲಿ: ಸದ್ಯದಲ್ಲೇ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಶಸ್ಸನ್ನು ಸಾಧಿಸಲಿದೆ ಎಂದು ಹೇಳಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಪಕ್ಷಗಳ ವಿರುದ್ಧ ವಿರುದ್ದ ಶೇ.51ರ ಗೆಲವನ್ನು ಸಾಧಿಸುವ ಕಾರ್ಯತಂತ್ರವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಚುನಾವಣೆ ಕಾಂಗ್ರೆಸ್ ಅಥವಾ ಇಂದಿರಾ ಗಾಂಧಿ ವಿರುದ್ಧ ಎಲ್ಲಾ ಪಕ್ಷಗಳು ಎಂಬ ವಾತಾವರಣ ಇತ್ತು, ಈಗ ಪರಿಸ್ಥಿತಿ ಬದಲಾಗಿದ್ದು ಈಗ ಚುನಾವಣೆ ಎಂದರೆ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಎಲ್ಲ ಪಕ್ಷಗಳು ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.