ವಿಕಾಸ್ ಸ್ವರೂಪ್ 
ದೇಶ

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ದಿನಾಂಕ ಇನ್ನೂ ನಿಗದಿಯಾಗಿಲ್ಲ

ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ...

ನವದೆಹಲಿ: ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ ರಾಷ್ಟ್ರಗಳಿಗೆ ಸಾಧ್ಯವಾಗಿಲ್ಲ. 
ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಅವರು,  'ಇದುವರೆಗೂ ಎರಡು ದೇಶಗಳಿಗೂ ಅನುಕೂಲಕರವಾದ ದಿನಾಂಕ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.
ಇನ್ನು ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ಸರ್ಕಾರಗಳು ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸ್ವರೂಪ್ ನಿರಾಕರಿಸಿದರು.
ಇದೇ ವೇಳೆ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಉಗ್ರ ಝಕಿಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿ ನೀಡಲು ಪಾಕ್ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ವರೂಪ್, ಈ ಬಗ್ಗೆ ಮಾಧ್ಯಮ ವರದಿ ನೋಡಿದ್ದೇನೆ. ಆದರೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!