ನವದೆಹಲಿ: ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರದ್ಧ ಕಠಿಣ ನಿಲುವು ತಾಳಿರುವ ಪ್ರಧಾನಿ ನರೇಂದ್ರ ಮೋದಿ, ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಎಚ್ಚರಿಕೆ ನೀಡಿದ ನಂತರವೂ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳದೇ ಇರುವ ಅಧಿಕಾರಿಗಳನ್ನು ಗುರುತಿಸಿ ಅಂತಹ ಅಧಿಕಾರಿಗಳನ್ನು ವಜಾಗೊಳಿಸುವುದು, ಪಿಂಚಣಿಯನ್ನು ತಡೆಹಿಡಿಯುವುದು ಸೇರಿದಂತೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಶಿಫಾರಸು ಮಾಡಲು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗಿನ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಹೆಚ್ಚಿನ ಸಾರ್ವಜನಿಕ ಸಂಪರ್ಕ ಹೊಂದಿರುವ ಇಲಾಖೆಗಳು ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಉನ್ನತ ಮಟ್ಟದ ಪರಿವೀಕ್ಷಣಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಮೋದಿ ಹೇಳಿದ್ದಾರೆ ಕಾರ್ಯದರ್ಶಿಗಳ ಸಭೆಯಲ್ಲಿ ಹಲವು ಯೋಜನೆಗಳ ಪ್ರಗತಿ ಪರಿಶೀಲನೆಯೂ ನಡೆದಿದೆ.