ಸಾಮೂಹಿಕ ಅತ್ಯಾಚಾರ: 6 ಯುವಕರ ವಿರುದ್ಧದ ಆರೋಪ ಸಾಬೀತು 
ದೇಶ

ಸಾಮೂಹಿಕ ಅತ್ಯಾಚಾರ: 6 ಯುವಕರ ವಿರುದ್ಧದ ಆರೋಪ ಸಾಬೀತು

ಪಶ್ಚಿಮ ಬಂಗಾಳದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಯುವಕರ ವಿರುದ್ಧವಿದ್ದ ಆರೋಪ ಗುರುವಾರ ಸಾಬೀತಾಗಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಯುವಕರ ವಿರುದ್ಧವಿದ್ದ ಆರೋಪ ಗುರುವಾರ ಸಾಬೀತಾಗಿದೆ.
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಕೋಲ್ಕತಾ ನ್ಯಾಯಾಲಯವು ಇದೀಗ 6 ಯುವಕರ ವಿರುದ್ಧ ಆರೋಪ ಸಾಬೀತಾಗಿದೆ ಎಂದು ತಿಳಿಸಿದ್ದು, ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಇತ್ತ ನ್ಯಾಯಾಲಯ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದರೆ, ಅತ್ತ ನ್ಯಾಯಾಲಯದ ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿತ್ತು. ನಂತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದರು. ಆದರೆ ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಪ್ರಕರಣದ ಹಿನ್ನೆಲೆ?2013ರ ಜೂನ್ ತಿಂಗಳಿನಲ್ಲಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಯುವಕರ ಗುಂಪೊಂದು ಅಪಹರಣ ಮಾಡಿತ್ತು. 1/28/2016
ನಂತರ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ಯುವಕರ ಗುಂಪು ಆಕೆಯನ್ನು ಹತ್ಯೆ ಮಾಡಿ ಕೋಲ್ಕತಾದಿಂದ 30 ಕಿ.ಮೀ ದೂರದಲ್ಲಿರುವ ಕಮ್ದುನಿ ಹಳ್ಳಿಯ ಕಾಲುವೆಯೊಂದರಲ್ಲಿ ಬಿಸಾಡಿದ್ದರು. ಈ ಪ್ರಕರಣ ಪಶ್ಚಿಮ ಬಂಗಾಳದಾದ್ಯಂತ ತೀವ್ರ ಸಂಚಲನವನ್ನು ಮೂಡಿಸಿತ್ತು. ಅಲ್ಲದೆ ಮಹಿಳೆಯರ ಸಂರಕ್ಷಣೆ ಕುರಿತಂತೆ ಅಲ್ಲಿನ ಸ್ಥಳೀಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತ್ಯಾಚಾರಕ್ಕಾಗಿ ಹತ್ಯೆಯಾದ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿದ್ದರು.
ಪ್ರಕರಣದಲ್ಲಿ 9 ಮಂದಿ ಭಾಗಿಯಾಗಿದ್ದು, ಇವರಲ್ಲಿ 6 ಮಂದಿಯ ವಿರುದ್ಧವಿದ್ದ ಆರೋಪ ಇಂದು ಸಾಬೀತಾಗಿದೆ. ಬಂಧಿತನಾಗಿದ್ದವರಲ್ಲಿ ಓರ್ವ ಯುವಕ ವಿಚಾರಣೆ ಹಂತದಲ್ಲಿ ಜೈಲಿನಲ್ಲಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು