ರಾಕೇಶ್ ಗರ್ಗ್ 
ದೇಶ

ಟೆಲಿಕಾಂ ಇಲಾಖೆ ಕಾರ್ಯದರ್ಶಿ ರಾಕೇಶ್ ಗರ್ಗ್ ವರ್ಗಾವಣೆ

ಟೆಲಿಕಾಂ ಇಲಾಖೆ ಕಾರ್ಯದರ್ಶಿ ರಾಕೇಶ್ ಗರ್ಗ್ ಅವರನ್ನು ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ಇಲಾಖೆಗೆ ವರ್ಗಾವಣೆ ಮಾಡಿದೆ.

ನವದೆಹಲಿ: ಟೆಲಿಕಾಂ ಇಲಾಖೆ ಕಾರ್ಯದರ್ಶಿ ರಾಕೇಶ್ ಗರ್ಗ್ ಅವರನ್ನು ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ಇಲಾಖೆಗೆ ವರ್ಗಾವಣೆ ಮಾಡಿದೆ.
ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಗರ್ಗ್ ಅವರು ಇನ್ನು 10 ತಿಂಗಳ ನಂತರ ನಿವೃತ್ತಿ ಹೊಂದಲಿದ್ದು, ನಿವೃತ್ತಿಗೂ ಕೆಲವೇ ತಿಂಗಳ ಮೊದಲು ಕೇಂದ್ರ ಸರ್ಕಾರ ಅವರನ್ನು ಅಲ್ಪಸಂಖ್ಯಾತ ಇಲಾಖೆಗೆ ವರ್ಗಾವಣೆಗೊಳಿಸಿದೆ. ಟೆಲಿಕಾಂ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ 1982 ರ ಬ್ಯಾಚ್ ನ ಐಎಎಸ್ ಅಧಿಕಾರಿ  ಜೆಎಸ್ ದೀಪಕ್ ಅವರನ್ನು ನೇಮಕ ಮಾಡಲಾಗಿದೆ. ದೀಪಕ್ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  
ಈ ಹಿಂದೆ ಅಲ್ಪಸಂಖ್ಯಾತ ಇಲಾಖೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ಸ್ವೀಕರಿಸಿದ್ದ ಅಮರೇಂದ್ರ ಸಿನ್ಹಾ ಅವರ ಸ್ಥಾನಕ್ಕೆ ರಾಕೇಶ್ ಗರ್ಗ್ ಅವರನ್ನು ನೇಮಿಸಲಾಗಿದೆ. ಗರ್ಗ್ ಅವರ ವರ್ಗಾವಣೆಗೆ ಕೇಂದ್ರ ಸರ್ಕಾರ ಸ್ಪಷ್ಟ ಕಾರಣ ನೀಡಿಲ್ಲ. ಜುಲೈ.17 2014 ರಲ್ಲಿ ಗರ್ಗ್ ಅವರು ಟೆಲಿಕಾಂ ಇಲಾಖೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT