ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ 
ದೇಶ

ರೋಹಿತ್ ವೇಮುಲ ಆತ್ಮಹತ್ಯೆ ಮೋದಿ ವಿರೋಧಿ ಪ್ರಚಾರಕ್ಕಾಗಿ ಬಳಕೆ: ವೆಂಕಯ್ಯ ನಾಯ್ಡು

ನವದೆಹಲಿ: ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದಾರೆ. 
ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನಿಟ್ಟುಕೊಂಡು ಮೊಸಳೆ ಕಣ್ಣೀರು ಸುರಿಸುತ್ತಿರುವುದನ್ನು ಕಾಂಗ್ರೆಸ್ ಬಿಡಬೇಕು, ರೋಹಿತ್ ವೇಮುಲಾ ಆತ್ಮಹತ್ಯೆಗೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ಯುಪಿಎ ಸರ್ಕಾರದ ಅವಧಿಯಲ್ಲಿ 9 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿದ್ದರು ಎಂದು ವೆಂಕಯ್ಯ ನಾಯ್ಡು ಪ್ರಶ್ನಿಸಿದ್ದಾರೆ.
ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್ ಪಕ್ಷಗಳು  ಮೋದಿ ವಿರೋಧಿ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!