ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಾಂಧೀಜಿಯವರಿಗೆ ಶನಿವಾರ ನಮನ ಸಲ್ಲಿಸಿದ್ದಾರೆ.
ಟ್ವಿಟರ್ ನಲ್ಲಿ ನಮನ ಸಲ್ಲಿಸಿರುವ ಅವರು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧಿಯವರಿಗೆ ಕೋಟಿ ಕೋಟಿ ನಮನ. ದೇಶದಲ್ಲಿರುವ ಪ್ರತಿಯೊಬ್ಬರು ಗಾಂಧೀಜಿಯವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ದೇಶಕ್ಕಾಗಿ ಪ್ರಾಣ ತೆತ್ತ ಹುತಾತ್ಮರ ಶೌರ್ಯವನ್ನು ನೆನೆಯಲೇಬೇಕು. ಅವರ ತ್ಯಾಗ ಎಂದಿಗೂ ಅಮರವಾಗಿರುತ್ತದೆ. ದೇಶಕ್ಕಾಗಿ ತ್ಯಾಗ ಮಾಡಿದ ಗಣ್ಯರಿಗೆ ನಿಂತು ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.