ಉತ್ತರ ಪ್ರದೇಶ 
ದೇಶ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಆರ್ ಎಲ್ ಡಿ ಯೊಂದಿಗೆ ಮಹಾಮೈತ್ರಿ ರಚನೆಗೆ ಜೆಡಿಯು ಕಸರತ್ತು

ಬಿಹಾರದಲ್ಲಿ ಜೆಡಿಯು ನೇತೃತ್ವದ ಆರ್ ಜೆಡಿ, ಕಾಂಗ್ರೆಸ್ ಮೈತ್ರಿಕೂಟದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲೂ ಬಿಜೆಪಿ ಜೆಡಿಯು ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ.

ನವದೆಹಲಿ: ಬಿಹಾರದಲ್ಲಿ ಜೆಡಿಯು ನೇತೃತ್ವದ ಆರ್ ಜೆಡಿ, ಕಾಂಗ್ರೆಸ್ ಮೈತ್ರಿಕೂಟದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಜೆಡಿಯು ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ.
ಉತ್ತರ ಪ್ರದೇಶದಲ್ಲಿ 2017 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಜೆಡಿಯು ಹಾಗೂ ಆರ್ ಎಲ್ ಡಿ ಪಕ್ಷಗಳು ಸ್ಥಳೀಯ ಪಕ್ಷಗಳನ್ನೊಳಗೊಂಡ ಮೈತ್ರಿಕೂಟ ರಚನೆಗೆ ಕಸರತ್ತು ನಡೆಸಿವೆ. ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅವರನ್ನು ಆರ್ ಎಲ್ ಡಿ ನಾಯಕ ಅಜಿತ್ ಸಿಂಗ್ ಭೇಟಿ ಮಾಡಿದ್ದು ಬಿಜೆಪಿ ವಿರುದ್ಧ ಜೆಡಿಯು ನೇತೃತ್ವದ ಮಹಾಮೈತ್ರಿಕೂಟ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇದಕ್ಕೂ ಮುನ್ನ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದ ಅಜಿತ್ ಸಿಂಗ್ ಮಹಾಮೈತ್ರಿ ರಚನೆ ಬಗ್ಗೆ ಚರ್ಚಿಸಿದ್ದರು. ಜೆಡಿಯು ಆರ್ ಎಲ್ ಡಿ ಪಕ್ಷಗಳೊಂದಿಗೆ ಕೈ ಜೋಡಿಸಲು ಉತ್ತರ ಪ್ರದೇಶದ ಪ್ರಾದೇಶಿಕ ಪಕ್ಷವಾಗಿರುವ ಪೀಸ್ ಪಕ್ಷವೂ ಉತ್ಸುಕವಾಗಿದ್ದು ಪೀಸ್ ಪಕ್ಷದ ನಾಯಕ ಅಯೂಬ್ ಅನ್ಸಾರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.    
ಮೈತ್ರಿ ರಚನೆ ಬಗ್ಗೆ ಇಂದು(ಜ.31 ) ರಂದು ಲಖನೌ ನಲ್ಲಿ ನಡೆಯಲಿರುವ ಜೆಡಿಯು ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ. ಉತ್ತರ ಪ್ರದೇಶದಲ್ಲಿ ಮೈತ್ರಿ ರಚನೆಗೆ  ಪ್ರಾದೇಶಿಕ ಪಕ್ಷಗಳನ್ನು ಸಂಘಟಿಸುವ  ಜವಾಬ್ದಾರಿಯನ್ನು ಜೆಡಿಯು ಪಕ್ಷದ ಕಾರ್ಯದರ್ಶಿ ಕೆಸಿ ತ್ಯಾಗಿ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!