ಯಶ್ವಂತ್ ಸಿನ್ಹಾ 
ದೇಶ

ಇಂದಿರಾಗಾಂಧಿ ಸರ್ಕಾರಕ್ಕೆ ಎದುರಾದ ಸ್ಥಿತಿಯೇ ಮೋದಿ ಸರ್ಕಾರಕ್ಕೂ ಬರಲಿದೆ: ಯಶ್ವಂತ್ ಸಿನ್ಹಾ

ತುರ್ತು ಪರಿಸ್ಥಿತಿ ಬಳಿಕ ಇಂದಿರಾ ಗಾಂಧಿ ಸರ್ಕಾರ ಎದುರಿಸಿದ್ದ ಸ್ಥಿತಿಯನ್ನೇ ಮೋದಿ ಸರ್ಕಾರವೂ ಎದುರಿಸಲಿದೆ ಎಂದು ಯಶ್ವಂತ್ ಸಿನ್ಹಾ ಹೇಳಿದ್ದಾರೆ.

ಡೊನಾ ಪೌಲಾ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ  ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ, ತುರ್ತು ಪರಿಸ್ಥಿತಿ ಬಳಿಕ ಇಂದಿರಾ ಗಾಂಧಿ ಸರ್ಕಾರ ಎದುರಿಸಿದ್ದ ಸ್ಥಿತಿಯನ್ನೇ ಮೋದಿ ಸರ್ಕಾರವೂ ಎದುರಿಸಲಿದೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗಿರುವುದಕ್ಕೆ ಅಸಮಾಧಾನಗೊಂಡಿರುವ ಯಶ್ವಂತ್ ಸಿನ್ಹಾ, ಡಿಫಿಕಲ್ಟ್ ಡೈಲಾಗ್ಸ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ್ದು ಭಾರತದ ಪ್ರಜಾಪ್ರಭುತ್ವದ ಶಕ್ತಿಯಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಡೆಗಣಿಸಲಾಗುತ್ತಿದೆ. ಈಗಿನ  ಸ್ಥಿತಿ ಬಗ್ಗೆ ಆತಂಕವಿರಬಹುದು ಆದರೆ ದೇಶದ ಜನತೆ ಈ ಬಗ್ಗೆ ಕಾಳಜಿ ವಹಿಸಿ,  ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಡೆಗನಿಸುತ್ತಿರುವವರನ್ನು ತಿರಸ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.
"ಅವರನ್ನು ದೇಶದ ಜನ ಮುಂದಿನ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ, ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ, ಮುಂದಿನ ಚುನಾವಣೆ ವರೆಗೂ ಕಾಯಬೇಕಷ್ಟೇ ಎಂದು ಪ್ರಧಾನಿ ಮೋದಿ ವಿರುದ್ಧ ಯಶ್ವಂತ್ ಸಿನ್ಹಾ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಸಂವಾದಗಳನ್ನು ನಿರ್ಲಕ್ಷಿಸುತ್ತಿರುವವರಿಗೆ 1977 ರಲ್ಲಿ ಇಂದಿರಾ ಗಾಂಧಿ ಸರ್ಕಾರಕ್ಕೆ ಎದುರಾದ ಸ್ಥಿತಿಯೇ ಎದುರಾಗಲಿದೆ ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್