ರಾಷ್ಟ್ರಧ್ವಜ ಸುಡುತ್ತಿರುವ ದಿಲೀಪನ್ ನರೇಂದ್ರನ್ (ಚಿತ್ರಕೃಪೆ: ಫೇಸ್ ಬುಕ್) 
ದೇಶ

ರಾಷ್ಟ್ರಧ್ವಜಕ್ಕೆ ಬೆಂಕಿ; ವೈರಲ್ ಆಯ್ತು ಯುವಕನ ಫೋಟೋ

ತಮಿಳುನಾಡು ಮೂಲದ ಯುವಕನೊಬ್ಬ ರಾಷ್ಟ್ರಧ್ವಜಕ್ಕೆ ಬೆಂಕಿ ಹಾಕುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕನ ವಿರುದ್ಧ ಇದೀಗ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ...

ಚೆನ್ನೈ: ತಮಿಳುನಾಡು ಮೂಲದ ಯುವಕನೊಬ್ಬ ರಾಷ್ಟ್ರಧ್ವಜಕ್ಕೆ ಬೆಂಕಿ ಹಾಕುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕನ ವಿರುದ್ಧ ಇದೀಗ ದೇಶದ್ರೋಹ ಪ್ರಕರಣ  ದಾಖಲಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.

ಮೂಲತಃ ತಮಿಳುನಾಡು ಮೂಲದ ನಾಗಪಟ್ಟಣಂ ಮೂಲದ ದಿಲೀಪನ್ ಮಹೇಂದ್ರನ್ ಎಂಬ ಯುವಕ ತನ್ನ ಫೇಸ್ ಬುಕ್ ಖಾತೆಯಲ್ಲಿ ರಾಷ್ಟ್ರಧ್ವಜಕ್ಕೆ ಬೆಂಕಿ ಇಡುತ್ತಿರುವ ಫೊಟೋಗಳನ್ನು ಅಪ್ ಲೋಡ್  ಮಾಡಿದ್ದು, ಯುವಕನ ಈ ದುರ್ವರ್ತನೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಇನ್ನು ದಿಲೀಪನ್ ಮಹೇಂದ್ರನ್ ವಿರುದ್ದ ಸಿಆರ್ ನವೀನ್ ಕುಮಾರ್ ಎಂಬ  ಪೈಲಟ್ ದೂರು ಕೂಡ ದಾಖಲಿಸಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ದಿಲೀಪನ್ ನರೇಂದ್ರನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರುಗಿಸಬೇಕು ಎಂದು ಸಿಆರ್ ನವೀನ್ ಕುಮಾರ್  ಆಗ್ರಹಿಸಿದ್ದಾರೆ. ಇನ್ನೂ ಕೆಲವು ಖಾತೆದಾರರು ಈತನ ಮೊಬೈಲ್ ಸಂಖ್ಯೆಯನ್ನು ಕೂಡ ಶೇರ್ ಮಾಡಿ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?