ಬಿಜೆಪಿ 
ದೇಶ

ಕಾಂಗ್ರೆಸ್ ನ ಅಡಚಣೆ ನಡುವೆಯೂ ಪ್ರಧಾನಿ ಮೋದಿ ಭರವಸೆ ಈಡೇರಿಸುತ್ತಿದ್ದಾರೆ: ಬಿಜೆಪಿ

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ನ ಅಡ್ಡಿ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಭರವಸೆಗಳನ್ನು ಈಡೇರಿಸುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ನವದೆಹಲಿ: ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ನ ಅಡ್ಡಿ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಭರವಸೆಗಳನ್ನು ಈಡೇರಿಸುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ನಡೆಸುತ್ತಿರುವ ಸರ್ಕಾರ ವಿರೋಧಿ ಪ್ರಚಾರಗಳು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿಯಾಗುತ್ತಿರುವುದನ್ನು ಸಹಿಸಲಾಗದ ಹತಾಶೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ, ನಿರಂತರ ಅಡಚಣೆಗಳ ಹೊರತಾಗಿಯೂ ಪ್ರಧಾನಿ ಮೋದಿ ಭರವಸೆಗಳನ್ನು ಈಡೇರಿಸುವುದರಲ್ಲಿ ಸಫಲರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಆರೋಪಿಸಿದ್ದಾರೆ.    
ವಿರೋಧಪಕ್ಷ ಕಾಂಗ್ರೆಸ್, ಸಂಸತ್ ಅಧಿವೇಶನ ವ್ಯರ್ಥವಾಗಿಸುವ ಮೂಲಕ ಪ್ರಮುಖ ಮಸೂದೆಗಳು ಅಂಗೀಕಾರವಾಗುವುದನ್ನು ತಡೆಗಟ್ಟಿದೆ. ಹಗರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ತಮ್ಮ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಶ್ರೀಕಾಂತ್ ಶರ್ಮಾ ಆರೋಪಿಸಿದ್ದಾರೆ.  
ಮೋದಿ ಅವರನ್ನು ಟೀಕಿಸುವವರ ಪಕ್ಷದ ಮುಖ್ಯಮಂತ್ರಿಗಳ ವಿರುದ್ಧ ಹಗರಣದ ಆರೋಪಗಳು ಕೇಳಿಬರುತ್ತಿದ್ದರೆ,  ಕೇಂದ್ರ ಸರ್ಕಾರ ಟೀಕೆಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದೆ ಎಂದಿದೆ ಬಿಜೆಪಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!