ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ (ಸಂಗ್ರಹ ಚಿತ್ರ) 
ದೇಶ

ಉತ್ತರಾಖಂಡದಲ್ಲಿ ಮತ್ತೆ ಭಾರಿ ಮಳೆ; ರಕ್ಷಣಾ ಕಾರ್ಯಾಚರಣೆಗೆ ತೀವ್ರ ಹಿನ್ನಡೆ

ಮೇಘಸ್ಫೋಟದಿಂದ ಪ್ರವಾಹದಲ್ಲಿ ಸಿಲುಕಿರುವ ಉತ್ತರಾಖಂಡ ಜನತೆಗೆ ಭಾನುವಾರ ಬೆಳಗ್ಗಿನಿಂದಲೇ ಆರಂಭವಾಗಿರುವ ಭಾರಿ ಮಳೆ ಮತ್ತಷ್ಟು ಸಂಕಷ್ಟ ತಂದೊಡ್ಡಿದ್ದು, ಜಲಾವೃತ್ತ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಹಿನ್ನಡೆಯಾಗಿದೆ...

ಡೆಹ್ರಾಡೂನ್: ಮೇಘಸ್ಫೋಟದಿಂದ ಪ್ರವಾಹದಲ್ಲಿ ಸಿಲುಕಿರುವ ಉತ್ತರಾಖಂಡ ಜನತೆಗೆ ಭಾನುವಾರ ಬೆಳಗ್ಗಿನಿಂದಲೇ ಆರಂಭವಾಗಿರುವ ಭಾರಿ ಮಳೆ ಮತ್ತಷ್ಟು ಸಂಕಷ್ಟ ತಂದೊಡ್ಡಿದ್ದು,  ಜಲಾವೃತ್ತ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಹಿನ್ನಡೆಯಾಗಿದೆ.

ಭಾನುವಾರ ಬೆಳಗ್ಗಿನಿಂದಲೇ ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರಮುಖ ಹೆದ್ದಾರಿಗಳು ಮತ್ತು ಪ್ರಮುಖ ಯಾತ್ರಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು ಭೂಕುಸಿತದಿಂದಾಗಿ  ಸ್ಥಗಿತಗೊಂಡಿವೆ. ಹೀಗಾಗಿ ಚಾರ್ ಧಾಮ್ ಯಾತ್ರೆ ಬಹುತೇಕ ಸ್ಥಗಿತವಾಗಿದ್ದು, ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳು ಇದೀಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಚಮೋಲಿ-ಭದ್ರಿನಾಥ್  ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 58 ಹಾಗೂ ಚಂಬಾ-ರಿಷಿಕೇಶ ಸಂಪರ್ಕಿಸುವ ರಾಷ್ಟ್ರೀಯ 94ರಲ್ಲಿ ಭೂಕುಸಿತ ಉಂಟಾಗಿ ಎರಡೂ ಹೆದ್ದಾರಿಗಳು ಸ್ಥಗಿತಗೊಂಡಿವೆ.

ಇನ್ನು ಈ ವರೆಗೂ ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟಕ್ಕೆ ಸಾವನ್ನಪ್ಪಿದವರ ಸಂಖ್ಯೆ 38ಕ್ಕೇರಿಕೆಯಾಗಿದ್ದು, ಪಿಥೋರ್ ಘಡ ವೊಂದರಲ್ಲೇ 25 ಮಂದಿ ಶವಗಳ ದೊರೆತಿವೆ. ಇನ್ನು  ಜಲಾವೃತ್ತ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಸತತ ಭಾರಿ ಮಳೆ ತೀವ್ರ ಅಡ್ಡಿಯುಂಟು ಮಾಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸೈನಿಕರೇ ಕೆಲ  ಪ್ರದೇಶಗಳಲ್ಲಿ ಅಪಾಯಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ಮಳೆ ನಿಲ್ಲದ ಹೊರತು ರಕ್ಷಣಾ ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು, ಮತ್ತೊಂದೆಡೆ ಕೇಂದ್ರ ಹವಾಮಾನ ಇಲಾಖೆ ಇನ್ನು 24 ಗಂಟೆಗಳಲ್ಲಿ ಮತ್ತೆ ಭಾರಿ ಮಳೆ  ಸಂಭವಿಸುವ ಕುರಿತು ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಪ್ರಸ್ತುತ ಉತ್ತರಾಖಂದ ಪರಿಸ್ಥಿತಿ 2013 ಭೀಕರ ಪ್ರವಾಹ ಮತ್ತೆ ಮರುಕಳಿಸಲಿದೆಯೇ ಎಂಬ ಭೀತಿ ಹುಟ್ಟಿಸುತ್ತಿದೆ.

ಹಿಮಾಚಲ ಪ್ರದೇಶ, ಮಹಾರಾಷ್ಟ್ರದಲ್ಲೂ ಭಾರಿ ಮಳೆ
ಇದೇ ವೇಳೆ ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಭಾರಿ ಮಳೆ ಬೀಳುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಯಾತ್ರಾ ಸ್ಥಳಗಳಲ್ಲಿ  ಪ್ರವಾಸಿಗರು ಪರದಾಡುವಂತಾಗಿದೆ. ಮುಂಬೈ ಗೇಟ್ ವೇ ಆಫ್ ಇಂಡಿಯಾದಲ್ಲಿ ಸಮುದ್ರದ ಅಲೆಗಳು ಮೇಲ್ಸೇತುವೆ ಮೇಲೆ ಅಪ್ಪಳಿಸುತ್ತಿವೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಗೇಟ್ ಆಫ್  ಇಂಡಿಯಾವನ್ನು ತಾತ್ಕಾಲಿಕವಾಗಿ ಮುಚ್ಚಿದ್ದು, ಭಾನುವಾರ ರಜೆಯನ್ನು ಕಳೆಯುವ ಸಲುವಾಗಿ ಅಲ್ಲಿಗೆ ಆಗಮಿಸಿದ್ದ ಪ್ರವಾಸಿಗರು ಹಾಗೆಯೇ ವಾಪಸ್ ಹೋಗುವಂತಾಗಿದೆ. ಇನ್ನು ತೀವ್ರ ಬರಗಾಲ  ಎದುರಿಸಿದ್ದ ಪುಣೆ ಮತ್ತು ನಾಸಿಕ್ ನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿ ರೈತರು ನಗುಮುಖದಿಂದ ತಮ್ಮ ಕೃಷಿ ಕೆಲಸದಲ್ಲಿ ತಲ್ಲೀನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!