ತಸ್ಲೀಮಾ ನಸ್ರೀನ್ 
ದೇಶ

ಬಾಂಗ್ಲಾದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಲೇಖಕಿ ತಸ್ಲೀಮಾ ನಸ್ರೀನ್

ಭಾರತರದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಢಾಕಾದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಭಾರತರದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಢಾಕಾದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಳಿದ್ದಾರೆ.

ಮೂಲಭೂತವಾದವನ್ನು ವಿರೋಧಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅನೇಕ ಬ್ಲಾಗರ್, ಬರಹಗಾರರನ್ನು ಬಾಂಗ್ಲಾದಲ್ಲಿ ಹತ್ಯೆ ಮಾಡಲಾಗುತ್ತಿದೆ. ಹತ್ಯೆಯಷ್ಟೇ ಅಲ್ಲದೆ ಹಲವು ಬರಹಗಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ತಪ್ಪಿಗಾಗಿ ಜೈಲು ಸೇರಿದ್ದಾರೆ ಎಂದು ತಸ್ಲೀಮಾ ನಾಸ್ರೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯಾತೀತ ಬರಹಗಾರರಿಗೆ ಭದ್ರತೆ ಒದಗಿಸುವಲ್ಲಿ ಬಾಂಗ್ಲಾದೇಶದ ಸರ್ಕಾರ ವಿಫಲವಾಗಿದ್ದು ಭಯದಿಂದ ಹಲವು ಬರಹಗಾರರು ಬರವಣಿಗೆಯನ್ನೇ ಬಿಟ್ಟು ಬಾಂಗ್ಲಾದಿಂದ ಅಮೆರಿಕ, ಜರ್ಮನಿ, ಭಾರತ, ನೇಪಾಳಕ್ಕೆ ವಲಸೆ ಹೋಗುತ್ತಿದ್ದಾರೆ. ಬಾಂಗ್ಲಾದ ಢಾಕಾದಲ್ಲಿ ದಾಳಿ ನಡೆಸಿದ ಉಗ್ರರು ಬಾಂಗ್ಲಾ ಪ್ರಜೆಗಳೇ ಆಗಿದ್ದರೂ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ, ಅಲ್-ಖೈದಾ ಉಗ್ರ ಸಂಘಟನೆಯೊಂದಿಗೆ ಉತ್ತಮ ಸಂಪರ್ಕವಿತ್ತು ಎಂದು ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

ಬಾಂಗ್ಲಾದಲ್ಲಿ ಉಗ್ರರ ದಾಳಿ ಹೆಚ್ಚುತ್ತಿದ್ದು, ದೇಶ ಇಸ್ಲಾಮೀಕರಣವಾಗುತ್ತಿರುವುದನ್ನು ಪ್ರಧಾನಿ ಶೇಖ್ ಹಸೀನಾ ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಲೇಖಕಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!