ರಾಧೆ ಮಾ 
ದೇಶ

ರಾಧೆ ಮಾ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪ ಕೈಬಿಟ್ಟ ಪೊಲೀಸರು

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ವಿಚಾರಣೆಗೆ ಒಳಗಾಗಿದ್ದ ವಿವಾದಿತ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ಅವರ ಹೆಸರನ್ನು...

ಮುಂಬೈ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ವಿಚಾರಣೆಗೆ ಒಳಗಾಗಿದ್ದ ವಿವಾದಿತ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಕಂಡಿವಲ್ಲಿ ಪೊಲೀಸರು ಸ್ಥಳೀಯ ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಸುಖವಿಂದರ್ ಕೌರ್ ಅಲಿಯಾಸ್ ರಾಧೆ ಮಾ ಹೆಸರನ್ನು ಕೈಬಿಡಲಾಗಿದೆ.
ರಾಧೆ ಮಾ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಮಗೆ ಇದುವರೆಗೂ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಈ ಮಧ್ಯೆ, ದೂರು ನೀಡಿದ ಮಹಿಳೆ ಪತಿ ಹಾಗೂ ಸೊಸೆ ಸೇರಿದಂತೆ ಇತರೆ ಆರು ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.
ಕಳೆದ ವರ್ಷ ರಾಧೆ ಮಾ ಅವರ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ - ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT