ಚೆನ್ನೈಯ ಸರ್ಕಾರಿ ರೊಯಪೆಟ್ಟ ಆಸ್ಪತ್ರೆಗೆ ಸ್ವಾತಿ ಕೊಲೆ ಆರೋಪಿ ಪಿ.ರಾಮ್ ಕುಮಾರ್ ನನ್ನು ಪೊಲೀಸರ ಭದ್ರತೆ ನಡುವೆ ಕರೆತರುತ್ತಿರುವುದು. 
ದೇಶ

ಸ್ವಾತಿ ಕೊಲೆ ಆರೋಪಿ ರಾಮ್ ಕುಮಾರ್ ಆರೋಗ್ಯದಲ್ಲಿ ಸುಧಾರಣೆ

ಇನ್ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ಆರೋಪಿ ಪಿ.ರಾಮ್ ಕುಮಾರ್ ನಗರದ ಸರ್ಕಾರಿ ರೋಯಪೆಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ...

ಚೆನ್ನೈ: ಇನ್ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ಆರೋಪಿ ಪಿ.ರಾಮ್ ಕುಮಾರ್ ನಗರದ ಸರ್ಕಾರಿ ರೋಯಪೆಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಟೆಗೆ ಸರ್ಪಗಾವಲು ರೀತಿಯಲ್ಲಿ ನಿನ್ನೆ ಆಸ್ಪತ್ರೆಯ ಸುತ್ತ ನೂರಕ್ಕೂ ಹೆಚ್ಚು ಪೊಲೀಸರು ಭದ್ರತೆಯ ವಿಷಯದಲ್ಲಿ ಸುತ್ತುವರಿದಿದ್ದರು.
ಇದರಿಂದ ಆಸ್ಪತ್ರೆಗೆ ಸಾಮಾನ್ಯವಾಗಿ ಖಾಯಿಲೆಗೆ ಬರುತ್ತಿದ್ದ ರೋಗಿಗಳಿಗೆ ತೊಂದರೆಯಾಗಿತ್ತು. ಭಾರೀ ಸಂಖ್ಯೆಯಲ್ಲಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳ ಜಂಗುಳಿಯಿಂದಾಗಿ ಕೆಲ ರೋಗಿಗಳು ಆಸ್ಪತ್ರೆಯಲ್ಲಿ ಉಳಿದುಕೊಳ್ಳಲಾಗದೆ ಡಿಸ್ಚಾರ್ಜ್ ಮಾಡಿಸಿಕೊಳ್ಳಲು ಯೋಚಿಸುತ್ತಿದ್ದರು.
ಇಷ್ಟಕ್ಕೆಲ್ಲಾ ಕಾರಣನಾದ ಆರೋಪಿ ರಾಮ್ ಕುಮಾರ್ ನನ್ನು ಆಸ್ಪತ್ರೆಯ ಪ್ರತ್ಯೇಕ ತೀವ್ರ ಕಷ್ಟ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆತನ ಆರೋಗ್ಯದಲ್ಲಿ ಸೋಮವಾರ ಸುಧಾರಣೆ ಕಂಡುಬಂದಿದ್ದು, ಘನ ಆಹಾರಗಳನ್ನು ಸೇವಿಸುವ ಸ್ಥಿತಿಗೆ ಮರಳಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ. ರಾಮ್ ಕುಮಾರ್ ಆಸ್ಪತ್ರೆಯಲ್ಲಿ ಇದ್ದುದರಿಂದಾಗಿ ನಿನ್ನೆ ಆಸ್ಪತ್ರೆಗೆ ಬಂದು ಹೋಗುತ್ತಿದ್ದವರನ್ನು ತಪಾಸಣೆ ನಡೆಸಿಯೇ ಬಿಡಲಾಗುತ್ತಿತ್ತು. ತೀವ್ರ ಭದ್ರತೆ ಕಂಡು ರೋಗಿಗಳು ಮತ್ತು ಅವರ ಕಡೆಯವರು ಗಾಬರಿಗೀಡಾಗಿದ್ದು ಸುಳ್ಳಲ್ಲ. 
ರಾಮ್ ಕುಮಾರ್ ನನ್ನು ನಿನ್ನೆ ಮುಂಜಾನೆ 4.30ರ ಸುಮಾರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಇಂದು ಕೈದಿಗಳ ವಾರ್ಡ್ ಗೆ ವರ್ಗಾಯಿಸುವ ಸಾಧ್ಯತೆಯಿದೆ. ಜುಲೈ 18ರವರೆಗೆ ರಾಮ್ ಕುಮಾರ್ ನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!