ದೇಶ

ಶೀಘ್ರದಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮದುವೆ: ವರದಿ

Lingaraj Badiger
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ್ಯ ಹಾಗೂ ದೇಶದ ಮೋಸ್ಟ್ ಬ್ಯಾಚುಲರ್ ರಾಜಕಾರಣಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಯುವತಿಯೊಂದಿಗೆ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಇದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. 
46 ವರ್ಷದ ಕಾಂಗ್ರೆಸ್ ಯುವರಾಜ ಉತ್ತರ ಪ್ರದೇಶದ ಅಲಹಬಾದ್ ನ  ಬ್ರಾಹ್ಮಣ ಕುಟುಂಬವೊಂದರ ಯುವತಿನ್ನು ಆಗಸ್ಟ್ ತಿಂಗಳಲ್ಲಿ ಮದುವೆಯಾಗುತ್ತಿದ್ದಾರೆ ಎನ್ನಲಾಗಿದೆ. 
ಹಿರಿಯ ಪತ್ರಕರ್ತೆ ಸಾಗರಿಕ ಘೋಷ್ ಅವರು, ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಉತ್ತಮ ಶಿಕ್ಷಣ ಪಡೆದ ಯುವತಿಯೊಂದಿಗೆ ಮದುವೆಯಾಗುತ್ತಿದ್ದಾರೆ ಎಂಬ ಖಚಿತವಲ್ಲದ ಮಾಹಿತಿ ಬಂದಿದೆ ಎಂದು ಟ್ವೀಟ್ ಮಾಡಿದ ನಂತರ ರಾಹುಲ್ ಮದುವೆ ಸುದ್ದಿ ವೈರಲ್ ಆಗಿದೆ.
ಇನ್ನು ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಮುಂದಿನ ವರ್ಷದ ಉತ್ತರ ಪ್ರದೇಶ ಚುನಾವಣೆಯ ಮೊದಲೇ ಕಾಂಗ್ರೆಸ್ ನ "ಯುವ ರಾಜಕಾರಣಿ" ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬ್ರಾಹ್ಮಣ ಸಮುದಾಯದ ಯುವತಿಯೊಂದಿಗೆ ಮದುವೆ ನಡೆಯಲಿದ್ದು, ಈಗಾಗಲೇ ಪೂರ್ವ ತಯಾರಿ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸದ್ಯ ಸ್ವಾಮಿ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಎಲ್ಲಾ ಬೆಳವಣಿಗೆಯನ್ನು ಕಾಂಗ್ರೆಸ್ ತಳ್ಳಿಹಾಕಿದ್ದು ಪಕ್ಷದ ಸಂಪರ್ಕ ವಿಭಾಗದ ಮುಖ್ಯಸ್ಥ ರಣ್ ದೀಪ್ ಸರ್ಜೇವಾಲ ಅವರು ಸ್ವಾಮಿಯವರ ಮಾತು ಸುಳ್ಳು ಎಂದು ಹೇಳಿದ್ದಾರೆ. 
ಮತ್ತೊಂದು ಮೂಲಗಳ ಪ್ರಕಾರ ರಾಹುಲ್ ಗಾಂಧಿಗೆ ಈಗಾಗಲೇ ನಿಶ್ಚಿತಾರ್ಥ ನಡೆದಿದ್ದು ಮುಂದಿನ ಆಗಸ್ಟ್ ನಲ್ಲಿ ಉತ್ತರ ಪ್ರದೇಶದ ಅಲಹಾಬಾದ ಆನಂದ ಭವನ್ ನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಈ ಮದುವೆಯೂ  ಮುಂದಿನ ಉತ್ತರ ಪ್ರದೇಶದ 2017ರ ಚುನಾವಣೆಯ ಮೇಲೂ ಹೆಚ್ಚಿನ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.
SCROLL FOR NEXT