ನವದೆಹಲಿ: ಸಂಪುಟ ದರ್ಜೆ ಸಚಿವರಾಗಿ ಬಡ್ತಿ ಪಡೆದಿರುವ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್, ಶಿಕ್ಷಣದ ಗುಣಮಟ್ಟವನ್ನು ಸುಧಾರಣೆ ಮಾಡುವುದೇ ಅತಿ ದೊಡ್ಡ ಸವಾಲು ಎಂದು ಹೇಳಿದ್ದಾರೆ.
ಶಿಕ್ಷಣ ಜೀವನಕ್ಕೆ ಮೌಲ್ಯಗಳನ್ನು ನೀಡುತ್ತದೆ. ಪ್ರತಿಯೊಬ್ಬ ಪೋಷಕರು ಸಹ ಮಕ್ಕಳನ್ನು ಶಾಲೆಗೆ ಕಲಿಸಲು ಶ್ರಮವಹಿಸಿ ದುಡಿಯುತ್ತಾರೆ. ಇಂದಿನ ದಿನಗಳ ಅತಿ ದೊಡ್ಡ ಸವಾಲೆಂದರೆ ಅದು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದಾಗಿದೆ ಎಂದು ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಕ್ಷಣದ ಬಗ್ಗೆ ಸ್ಪಷ್ಟ ದೂರದೃಷ್ಟಿ ಇದ್ದು ಅದನ್ನು ಈಡೇರಿಸುವತ್ತ ಶ್ರಮಿಸುತ್ತೇವೆ ಎಂದು ಪ್ರಕಾಶ್ ಜಾವ್ಡೇಕರ್ ಭರವಸೆ ನೀಡಿದ್ದಾರೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯವಿದ್ದು, ಶಿಕ್ಷಣ ಕೇಂದ್ರ ಸರ್ಕಾರದ ರಾಷ್ಟ್ರೀಯ ಕಾರ್ಯಸೂಚಿಗಳ ಪೈಕಿ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.