ಕೇಂದ್ರ ಸಚಿವೆ ಸ್ಮೃತಿ ಇರಾನಿ 
ದೇಶ

'ಏನು ಮಾಡಿದ್ರೂ ಜನ ಏನಾದರೊಂದು ಹೇಳ್ತಾನೇ ಇರ್ತಾರೆ': ಸ್ಮೃತಿ ಇರಾನಿ

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದಿಂದ ಆಶ್ಚರ್ಯಕರ ರೀತಿಯಲ್ಲಿ ನಿರ್ಗಮನಗೊಂಡು ಜವಳಿ ಖಾತೆಯಾಗಿ ಅಧಿಕಾರ ...

ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದಿಂದ ಆಶ್ಚರ್ಯಕರ ರೀತಿಯಲ್ಲಿ ನಿರ್ಗಮನಗೊಂಡು ಜವಳಿ ಖಾತೆಯಾಗಿ ಅಧಿಕಾರ ವಹಿಸಿಕೊಂಡಿರುವ ಸ್ಮೃತಿ ಇರಾನಿಯವರ ಬಗ್ಗೆ ಮೂರ್ನಾಲ್ಕು ದಿನಗಳಿಂದ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣದಲ್ಲಿ ಹಲವು ರೀತಿಯಲ್ಲಿ ಮಾತುಗಳು ಕೇಳಿಬರುತ್ತಿವೆ. 
ಈ ಬಗ್ಗೆ ನಿನ್ನೆ ಜವಳಿ ಖಾತೆ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಸ್ಮೃತಿ ಇರಾನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. '' ಕೆಲವೊಮ್ಮೆ ಏನು ಮಾಡಿದರೂ ಕೂಡ ಜನರು ಏನಾದರು ಹೇಳುತ್ತಾರೆ, ಏನಾದರೂ ಹೇಳಿಕೊಂಡಿರುವುದೇ ಅವರ ಅಭ್ಯಾಸ''ಎಂದು ಪ್ರತಿಕ್ರಿಯೆ ನೀಡಿದರು.
ಅತ್ಯುನ್ನದ ಸಚಿವಾಲಯವಾದ ಮಾನವ ಸಂಪನ್ಮೂಲ ಇಲಾಖೆ ಹುದ್ದೆಯಿಂದ ಜವಳಿ ಖಾತೆ ನೀಡಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳು, ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ನಿಮಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಸಚಿವೆ ಹಿಂದಿ ಸಿನಿಮಾವೊಂದರ ಎವರ್ ಗ್ರೀನ್ ಪದ್ಯವೊಂದನ್ನು ಉಲ್ಲೇಖಿಸಿ ಹೇಳಿದರು.
ನಿನ್ನೆ (ಬುಧವಾರ) ಜವಳಿ ಖಾತೆ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಅವರು, ಜವಳಿ ಕೈಗಾರಿಕೋದ್ಯಮವನ್ನು ಅಭಿವೃದ್ಧಿಪಡಿಸುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾಗಿದೆ. ಈ ನಿಟ್ಟಿನಲ್ಲಿ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿದ ಇರಾನಿ, ನಂಬಿಕೆ ಮೇಲೆ ಪ್ರಧಾನಿಯವರು ತಮಗೆ ಈ ಖಾತೆ ನೀಡಿದ್ದಾರೆ ಎಂದು ಸೂಚ್ಯವಾಗಿ ಹೇಳಿದರು.
ಜವಳಿ ಸಚಿವಾಲಯಕ್ಕೆ 6 ಸಾವಿರ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡಿರುವ ಬಗ್ಗೆ ತಮಗೆ ಸಂತೋಷವಿದೆ ಎಂದು ಹೇಳಿದ ಸ್ಮೃತಿ ಇರಾನಿ, ಸದ್ಯದಲ್ಲಿಯೇ ನೂತನ ಉಡುಪು ನೀತಿಯನ್ನು ಜಾರಿಗೆ ತರಲಾಗುವುದು ಎಂದರು.
ಹೆಆರ್ ಡಿ ಸಚಿವೆಯಾಗಿ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ವಿವಾದಗಳನ್ನು ಎದುರಿಸಿದ ಸ್ಮೃತಿ ಇರಾನಿ, ಮೋದಿಯವರ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಎಂಬ ದೂರದೃಷ್ಟಿಗೆ ಪೂರಕವಾಗಿ ಕೆಲಸ ಮಾಡಲು ತಮಗೆ ಅವಿರತವಾಗಿ ಸಹಾಯ ಮಾಡಿದ ಎಲ್ಲರಿಗೂ ಟ್ವಿಟ್ಟರ್ ನಲ್ಲಿ ಕೃತಜ್ಞತೆ ಸಲ್ಲಿಸಿದ್ದರು.
 ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಕಳೆದ ಎರಡು ವರ್ಷಗಳಲ್ಲಿ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್