ಹಿಂದೂ ವ್ಯಕ್ತಿಯ ಶವ ಸಂಸ್ಕಾರ ನಡೆಸುತ್ತಿರುವ ಮುಸ್ಲಿಂ ಮಹಿಳೆ 
ದೇಶ

ತಂದೆಯ ಅಂತ್ಯ ಸಂಸ್ಕಾರ ನಡೆಸದ ಮಗ: ಹಿಂದೂ ಸಂಪ್ರದಾಯದಂತೆ ಸಂಸ್ಕಾರ ಪೂರೈಸಿದ ಮುಸ್ಲಿಂ ಮಹಿಳೆ

ಮಾನವೀಯತೆ ಪದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬಹುಶಃ ಸಿಗಲಾರದು. ವೃದ್ಧಾಶ್ರಮದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಅಂತಿಮ ಸಂಸ್ಕಾರವನ್ನು ಉಸ್ತುವಾರಿ ...

ವಾರಂಗಲ್: ಮಾನವೀಯತೆ ಪದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬಹುಶಃ ಸಿಗಲಾರದು. ವೃದ್ಧಾಶ್ರಮದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಅಂತಿಮ ಸಂಸ್ಕಾರವನ್ನು ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಸ್ಲಿಂ ಮಹಿಳೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ವಾರಾಂಗಲ್ ನ ಹನ್ಮಕೊಂಡದ ಸಹೃದಯ ವೃದ್ದಾಶ್ರಮದಲ್ಲಿ  75 ವರ್ಷದ ಕೀರ್ತಿ ಶ್ರೀನಿವಾಸ್ ಎಂಬ ದೀರ್ಘಕಾಲದ ಅನಾರೋಗ್ಯದಿಂದ ಮೃತ ಪಟ್ಟಿದ್ದರು.

ಈ ವಿಷಯನ್ನು ಕೀರ್ತಿ ಶ್ರೀನಿವಾಸ್ ಪುತ್ರ ಶರತ್ ಗೆ ತಿಳಿಸಲಾಯಿತು, ಆದರೆ ಆತ ತಾನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಅಂತಿಮ ವಿಧಿವಿಧಾನಗಳನ್ನು ನೆರೆವೇರಿಸಲು ಸಾಧ್ಯವಿಲ್ಲ ಎಂದು ಹೇಳಿ ಅಲ್ಲಿಂದ ಹೊರಟು ಹೋದ. ನಂತರ ಬಂದ ಸಂಬಂಧಿಕರು ಭೇಟಿ ನೀಡಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳದೇ ನುಣುಚಿಕೊಂಡರು.

ನಂತರ ಕೀರ್ತಿ ಶ್ರೀನಿವಾಸ್ ಅವರನ್ನು ನೋಡಿಕೊಳ್ಳುತ್ತಿದ್ದ ಮುಸ್ಲಿಂ ಮಹಿಳೆ ಯಾಕೂಬಿ ಹಿಂದೂ ವಿಧಿ ವಿಧಾನದಂತೆ ತಾನೇ ಮೃತ ವ್ಯಕ್ತಿಯ ಅಂತಿಮ ಸಂಸ್ಕಾರ ನಡೆಸುವುದಾಗಿ ನಿರ್ಧರಿಸಿದರು. ಅದರಂತೆ ಶವದ ಮೆರವಣಿಗೆಯಲ್ಲಿ, ಹೆಗಲ ಮೇಲೆ ಮಡಕೆ ಹೊತ್ತು,ಕೊಂಡು ಹೋಗಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!