ಆರೋಪಿ ರಾಮ್ ಕುಮಾರ್ 
ದೇಶ

ಚೆನ್ನೈಗೆ ಬರಲು ಸ್ವಾತಿ ಹೇಳಿದ್ದಳು: ಕೊಲೆ ಆರೋಪಿ ರಾಮ್ ಕುಮಾರ್

ಇನ್ ಫೋಸಿಸ್ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶಂಕಿತ ಆರೋಪಿ ರಾಮ್ ಕುಮಾರ್ ಸ್ವಾತಿಯೇ ನನ್ನನ್ನು ಚೆನ್ನೈಗೆ ...

ಚೆನ್ನೈ: ಇನ್ ಫೋಸಿಸ್ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶಂಕಿತ ಆರೋಪಿ ರಾಮ್ ಕುಮಾರ್ ಸ್ವಾತಿಯೇ ನನ್ನನ್ನು ಚೆನ್ನೈಗೆ ಬರುವಂತೆ ಕರೆದಿದ್ದಳು ಎಂದು ಹೇಳಿದ್ದಾನೆ.

ಆರೋಪಿ ರಾಮ್ ಕುಮಾರ್ ಪರ ವಕಾಲತ್ತು ವಹಿಸಿಕೊಂಡಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ವಕೀಲ ವೃತ್ತಿ ನಡೆಸುತ್ತಿರುವ 60 ವರ್ಷದ ಎಸ್ ಪಿ ರಾಮ್ ರಾಜ್ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡಿದ ನಂತರ, ಸ್ವಾತಿಯೇ ಚೆನ್ನೈಗೆ ಬರುವಂತೆ ರಾಮ್ ಕುಮಾರ್ ನನ್ನು ಕರೆದಿದ್ದಳು ಎಂದು ಹೇಳಿದ್ದಾರೆ.

ಆದರೆ ಪೊಲೀಸರು ವಕೀಲ ರಾಮ್ ರಾಜ್ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. ಸ್ವಾತಿ ಮತ್ತು ರಾಮ್ ಕುಮಾರ್ ನಡುವೆ ಯಾವುದೇ ಫೋನ್ ಸಂಭಾಷಣೆಯಾಗಲಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಸಂಭಾಷಣೆಯಾಗಲಿ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇನ್ನೂ ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ವಕೀಲ ರಾಮ್ ರಾಜ್. ಪೊಲೀಸರು ಬಿಡುಗಡೆ ಮಾಡಿರುವ ಸಿಸಿಟಿವಿ ದೃಶ್ಯದಲ್ಲಿ ಇರುವ ವ್ಯಕ್ತಿ ರಾಮ್ ಕುಮಾರ್ ಅಲ್ಲಾ. ಆತನಿಗೆ ಬೈಕ್ ಓಡಿಸಲು ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಮ್ ಕುಮಾರ್ ಬಂಧನವಾದ ದಿನದಿಂದ ಪೊಲೀಸರು ಆತನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ನಾನು ಅವರ ಕುಟುಂಬವನ್ನು ಭೇಟಿ ಮಾಡಲು ಬಿಡುತ್ತಿಲ್ಲ, ಜೊತೆಗೆ ಕಾರಾಗೃಹ ಅಧಿಕಾರಿಗಳು ಸಹ ನಾನು ರಾಮ್ ಕುಮಾರ್ ಅವರನ್ನು ಭೇಟಿ ಮಾಡಲು ನಿರಾಕರಿಸಿತ್ತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!