ಮೀರತ್: ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡದ ತೆರವು ಕಾರ್ಯಾಚರಣೆ ವೇಳೆ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೀರತ್ ನಲ್ಲಿ ನಡೆದಿದೆ.
ಜಿಲ್ಲಾಡಳಿತ ಯಾವುದೇ ಸೂಚನೆ ನೀಡದೇ ಅಕ್ರಮವಾಗಿ ನಿರ್ಮಿಸಲಾಗಿದ್ದ ಬೃಹತ್ ಮಾಲ್ ಅನ್ನು ಕೆಡವಲು ಮುಂದಾಗಿದೆ. ಈ ವೇಳೆ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಲ್ವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟರೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂರು ಅಂತಸ್ಥಿನ ಕಟ್ಟಡದ ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬೃಹತ್ ಮಾಲ್ ಏಕಾಏಕಿ ಕುಸಿದು ಈ ಅವಗಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.