ಸಲ್ಮಾನ್ ಖಾನ್ ಮತ್ತು ಮನೇಕಾ ಗಾಂಧಿ 
ದೇಶ

ಸಲ್ಮಾನ್ ಖಾನ್ ರೇಪ್ ಹೇಳಿಕೆ, ಸೆಲಬ್ರಿಟಿಗಳಿಗೆ ಪ್ರಾಮುಖ್ಯತೆ ಬೇಡ: ಮನೇಕಾ ಗಾಂಧಿ

ಬಾಲಿವುಡ್ ನಟ ಸಲ್ಮಾನ್ ಖಾನ್ ಅತ್ಯಾಚಾರದ ಬಗ್ಗೆ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮನೇಕಾ ಗಾಂಧಿ ಯಾವುದೇ ಪ್ರಕರಣಗಳಲ್ಲಿ ಅವರು ಪ್ರಸಿದ್ಧ ವ್ಯಕ್ತಿಗಳೆಂದು ಪ್ರಾಮುಖ್ಯತೆ ..

ನವದೆಹಲಿ: ಪ್ರಕರಣದ ತೀವ್ರತೆ ಬಗ್ಗೆ ಗಮನ ಹರಿಸಬೇಕೇ ಹೊರತು ಅದರಲ್ಲಿ ಭಾಗಿಯಾಗಿರುವ ಸೆಲಬ್ರಿಟಿಗಳಿಗೆ ಆದ್ಯತೆ ನೀಡಬಾರದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅತ್ಯಾಚಾರದ ಬಗ್ಗೆ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮನೇಕಾ ಗಾಂಧಿ ಯಾವುದೇ ಪ್ರಕರಣಗಳಲ್ಲಿ ಅವರು ಪ್ರಸಿದ್ಧ ವ್ಯಕ್ತಿಗಳೆಂದು ಪ್ರಾಮುಖ್ಯತೆ ನೀಡಬಾರದು ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸೂಚಿಸಿದ್ದಾರೆ.

ಸಲ್ಮಾನ್ ಖಾನ್ ವಿವಾದಾತ್ಮಕ ಹೇಳಿಕೆ ಸಂಬಂಧ ಜುಲೈ 7 ರಂದು ಹಾಜರಾಗುವಂತೆ ಮಹಾರಾಷ್ಟ್ರ ಮಹಿಳಾ ಆಯೋಗ ನೊಟೀಸ್ ನೀಡಿತ್ತು, ಆದರೆ ಸಲ್ಮಾನ್ ಖಾನ್ ಹಾಜರಾಗಿರಲಿಲ್ಲ. ಹೀಗಾಗಿ ಜುಲೈ 14 ರಂದು ಆಯೋಗದ ಮುಂದೆ ಹಾಜರಾಗಬೇಕೆಂದು ಮತ್ತೊಮ್ಮೆ ಸಮನ್ಸ್ ನೀಡಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗಗಳು ಸಲ್ಮಾನ್ ಖಾನ್ ಗೆ ಹಾಜರಾಗಿ ಪ್ರಕರಣ ಸಂಬಂಧ ವಿವರಣೆ ನೀಡಬೇಕೆಂದು ನೊಟೀಸ್ ನೀಡಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!