ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಆರ್ ಎಸ್ ಎಸ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಸಂಬಂಧಿತ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋ ರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ ಎಸ್ ದಾಖಲಿಸಿದ್ದ ಮಾನ ನಷ್ಟ ಮೊಕದ್ದಮೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಅಪೆಕ್ಸ್ ಕೋರ್ಟ್ ತಿರಸ್ಕರಿಸಿತ್ತು.
ರಾಹುಲ್ ಗಾಂಧಿ ವಿರುದ್ದ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಯಾವುದೇ ಹುರುಳಿಲ್ಲ. ಅವರ ವಿರುದ್ಧದ ಆರೋಪವನ್ನು ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ರಾಹುಲ್ ಪರ ವಕೀಲರು ವಾದಿಸಿದ್ದರು.
ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹತ್ಯೆಯಲ್ಲಿ ಆರ್ ಎಸ್ ಎಸ್ ಕೈವಾಡವಿತ್ತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.