ಉಗ್ರನ ಹತ್ಯೆಗೆ ಕಾಶ್ಮೀರ ಉದ್ವಿಗ್ನ: ಕರ್ಫ್ಯೂ ಜಾರಿ, ಸೇನೆ ನಿಯೋಜನೆ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಕಾಶ್ಮೀರ...
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಕಾಶ್ಮೀರ ಕಣಿವೆಯ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಹಿಂಸಾಚಾರ ತೀವ್ರಗೊಳ್ಳುತ್ತಿದ್ದಂತೆ ಕಾಶ್ಮೀರದಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಧಗಿತಗೊಳಿಸಲಾಗಿದೆ. ಇನ್ನು ಪುಲ್ವಾಮಾ, ಅನಂತನಾಗ್, ಶೋಪಿಯಾನ್, ಪುಲ್ಗಾಂವ್ ಮತ್ತು ಸೋಪೋರೆಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಭಾರತೀಯ ಸೇನೆಯನ್ನು ನಿಯೋಜಿಸಲಾಗಿದೆ.
ನಿನ್ನೆ ಬುರ್ಹಾನ್ ವಾನಿಯ ಅಂತ್ಯಸಂಸ್ಕಾರ ಮುಗಿದ ಮೇಲೆ ಉದ್ರಿಕ್ತರ ಗುಂಪು ಪೊಲೀಸ್ ಠಾಣೆ ಹಾಗೂ ಬಿಜೆಪಿ ಕಚೇರಿಗಳ ಮೇಲೆ ದಾಳಿ ಮಾಡಿದರು. ಈ ವೇಳೆ ಸಂಘರ್ಷದಲ್ಲಿ 11 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, 125ಕ್ಕೂ ಹೆಚ್ಚು ಜನ ಹಾಗೂ ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ.
21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.