ಉಡ್ತಾ ಪಂಜಾಬ್ 
ದೇಶ

ವೈದ್ಯರಿಗೆ ಉಡ್ತಾ ಪಂಜಾಬ್ ಚಿತ್ರದ ಪ್ರದರ್ಶನವನ್ನು ಆಯೋಜಿಸಲು ಏಮ್ಸ್ ಚಿಂತನೆ

ಮಾದಕ ವ್ಯಸನದ ವಿವಿಧ ರೂಪಗಳ ಬಗ್ಗೆ ವೈದ್ಯರಿಗೆ ಅರಿವು ಮೂಡಿಸಲು ಉಡ್ತಾ ಪಂಜಾಬ್ ಚಿತ್ರವನ್ನು ಪ್ರದರ್ಶನವನ್ನು ಆಯೋಜಿಸಲು ಏಮ್ಸ್ ನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ನವದೆಹಲಿ: ಮಾದಕ ವ್ಯಸನದ ವಿವಿಧ ರೂಪಗಳ ಬಗ್ಗೆ ವೈದ್ಯರಿಗೆ ಅರಿವು ಮೂಡಿಸಲು ಉಡ್ತಾ ಪಂಜಾಬ್ ಚಿತ್ರದ ಪ್ರದರ್ಶನವನ್ನು ಆಯೋಜಿಸಲು ಏಮ್ಸ್ ನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. 

ಮಾದಕ ವ್ಯಸನ ಸಮಸ್ಯೆ ಸಮಾಜದಲ್ಲಿ ಹರಡಿರುವ ಬಗ್ಗೆ ಹಾಗೂ ಅದರಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಮಾದಕ ವ್ಯಸನದಿಂದ ಕ್ರಿಮಿನಲ್ ಅಪರಾಧಗಳು ನಡೆಯುವ ಬಗ್ಗೆಯೂ ಉಡ್ತಾ ಪಂಜಾಬ್ ಚಿತ್ರದಲ್ಲಿ ತೋರಿಸಲಾಗಿದ್ದು ಮಾದಕ ವ್ಯಸನದ ವಿವಿಧ ಮುಖಗಳನ್ನು ಚಿತ್ರದಲ್ಲಿ ಅನಾವರಣಗೊಳಿಸಲಾಗಿದೆ ಈ ಹಿನ್ನೆಲೆಯಲ್ಲಿ ವೈದ್ಯರಿಗೆ ಉಪಯೋಗವಾಗಲು ಉಡ್ತಾ ಪಂಜಾಬ್ ಚಿತ್ರದ ಪ್ರದರ್ಶನ ಆಯೋಜಿಸಲಾಗಿದೆ ಎಂದು ಏಮ್ಸ್ ನ ಹಿರಿಯ ವೈದ್ಯರು ತಿಳಿಸಿದ್ದಾರೆ.

ಚಿತ್ರದ ಪ್ರದರ್ಶನದಿಂದ ವೈದ್ಯರಿಗೆ ಮಾದಕ ವ್ಯವಸಾನದ ವಿವಿಧ ಮುಖಗಳು ಹಾಗೂ ಅದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಲಿದ್ದು ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದು ಸುಲಭವಾಗಲಿದೆ ಎಂದು ಏಮ್ಸ್ ನ ಹಿರಿಯ ವೈದ್ಯರು, ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಏಮ್ಸ್ ರಾಷ್ಟ್ರಾದ್ಯಂತ ಮಾದಕ ವ್ಯಸನಕ್ಕೆ ಒಳಗಾದವರ ಬಗ್ಗೆ ಮಾಹಿತಿ ಸಂಗ್ರಹಿಸಲು ಇತ್ತೀಚೆಗಷ್ಟೇ ತೀರ್ಮಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT