ಸಲ್ಮಾನ್ ಖುರ್ಷಿದ್ 
ದೇಶ

ಭಾರತದ ಆಂತರಿಕ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕ್ ಗೆ ಹಕ್ಕಿಲ್ಲ: ಸಲ್ಮಾನ್ ಖುರ್ಷಿದ್

ಹಿಜಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿಯ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನದ ಹೇಳಿಕೆಗೆ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿರುಗೇಟು...

ನವದೆಹಲಿ: ಹಿಜಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿಯ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನದ ಹೇಳಿಕೆಗೆ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿರುಗೇಟು ನೀಡಿದ್ದಾರೆ.

ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಹಕ್ಕು ಯಾರಿಗೂ ಇಲ್ಲ, ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕ್ರಮ ಕೈಗೊಳ್ಳುವ ಅಧಿಕಾರ ಸೇನೆಗೆ ಇದೆ. ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಉಂಟಾಗಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಹಾಗೂ ಪ್ರಾಣಹಾನಿಯನ್ನು ತಪ್ಪಿಸಬೇಕೆಂದರೆ ಸೇನೆ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದರ ಬಗ್ಗೆ ಆಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ. ಒಂದು ವೇಳೆ ಸೇನೆಯ ಕ್ರಮವನ್ನು ಪ್ರಶ್ನಿಸಬೇಕೆಂದರೆ ಅದಕ್ಕೆ ಸುಪ್ರೀಂಕೋರ್ಟ್ ಹಾಗೂ ಮಾನವ ಹಕ್ಕುಗಳ ಆಯೋಗ ಇದೆ ಆದರೆ, ದೇಶದ ಹೊರಗಿನವರು ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ.  ಕಾಶ್ಮೀರದಲ್ಲಿ ಉಗ್ರನ ಹತ್ಯೆ ಬಗ್ಗೆ ಪ್ರತಿಕ್ರಿಯೆ  ನೀಡಿದ್ದ ಪಾಕಿಸ್ತಾನ, ಉಗ್ರ ಮುಜಾಫರ್ ವಾನಿಯ ಹಾಗೂ ಇತರ ಕಾಶ್ಮೀರಿ ಯುವಕರ ಹತ್ಯೆ ಶೋಚನೀಯವಾದದ್ದು ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖುರ್ಷಿದ್ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel