ನೇಪಾಳ-ದೆಹಲಿ ಬಸ್ ಅಪಘಾತ: 5 ಸಾವು. 30 ಗಾಯ
ರಾಜಧಾನಿ ದೆಹಲಿಗೆ ಬರುತ್ತಿದ್ದ ನೇಪಾಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ...
ಉತ್ತರಪ್ರದೇಶ: ರಾಜಧಾನಿ ದೆಹಲಿಗೆ ಬರುತ್ತಿದ್ದ ನೇಪಾಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ತಡರಾತ್ರಿ ನಡೆದಿದೆ.
ಸೋಮವಾರ ರಾತ್ರಿ ಖಾಸಗಿ ಬಸ್ ವೊಂದು ನೇಪಾಳದಿಂದ ದೆಹಲಿಗೆ ಆಗಮಿಸುತ್ತಿತ್ತು. ಇದರಂತೆ ಉತ್ತರಪ್ರದೇಶದ ಬಹರೈಚ್ ಬಳಿ ಬರುತ್ತಿದ್ದಂತೆ ಬಸ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.