ನರೇಂದ್ರ ಮೋದಿ 
ದೇಶ

ಉಗ್ರ ಬುರ್ಹಾನ್ ಹತ್ಯೆ: ಕಾಶ್ಮೀರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ಪ್ರಕರಣ ಹಾಗೂ ಪ್ರತಿಭಟನೆಗಳ ಕುರಿತು ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಫ್ರಿಕಾ ರಾಷ್ಟ್ರಗಳ ಪ್ರವಾಸದಿಂದ ಭಾರತಕ್ಕೆ ಮರಳಿದ್ದು, ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ಪ್ರಕರಣ ಹಾಗೂ ಪ್ರತಿಭಟನೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಸಚಿವರ ಸಭೆ ನಡೆಸಿದ್ದರು. ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ವಿವೇಚನಾಯುಕ್ತವಾಗಿ ಸೇನಾಪಡೆಯನ್ನು ಬಳಸಿಕೊಂಡು, ಅಮರನಾಥ ಯಾತ್ರಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕೆಂದು ಜು.11 ರಂದು ನಡೆದ ರಾಜನಾಥ್ ಸಿಂಗ್ ನ್ಯೂರ್ತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.  ಈಗ ವಿದೇಶ ಪ್ರವಾಸದಿಂದ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ಪರಿಸ್ಥಿತಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ಮುಜಾಫರ್ ವಾನಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರಿಂದ ಪ್ರತಿಭಟನೆ ನಡೆಯುತ್ತಿದ್ದು ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)