ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ

ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ನವದೆಹಲಿ: ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನಿರಾಳ ಲಭಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ  2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.

ಈ ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರಂತೆ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿರುವ ದೆಹಲಿ ಹೈ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ತೇಜಿಯವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದು, ಏಪ್ರಿಲ್ 18 ರವರೆಗೂ ತೀರ್ಪು ಕಾಯ್ದಿರಿಸಿದ್ದಾರೆ. ಹೈಕೋರ್ಟ್ ನ ಈ ಆದೇಶದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಿರಾಳ ಸಿಕ್ಕಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?