ಬಸ್ 
ದೇಶ

ಅಪಘಾತದಲ್ಲಿ ಗಾಯಗೊಂಡಿದ್ದ ಅಮರನಾಥ ಯಾತ್ರಿಕರನ್ನು ರಕ್ಷಿಸಿದ ಸ್ಥಳೀಯ ಮುಸ್ಲಿಂರು

ಅನಂತನಾಗ್ ಜಿಲ್ಲೆಯ ಬಿಜ್ಬೆಹರ ನಗರದ ಬಳಿ ಅಮರನಾಥ ಯಾತ್ರಾತ್ರಿಗಳ ಹೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ...

ಶ್ರೀನಗರ: ಅನಂತನಾಗ್ ಜಿಲ್ಲೆಯ ಬಿಜ್ಬೆಹರ ನಗರದ ಬಳಿ ಅಮರನಾಥ ಯಾತ್ರಾತ್ರಿಗಳ ಹೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ ಯಾತ್ರಾತ್ರಿಗಳನ್ನು ಸ್ಥಳೀಯ ಮುಸ್ಲಿಂರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರದಿಂದಾಗಿ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಮರನಾಥ ಯಾತ್ರೆಗೆ ತೆರಳಿದ್ದ ಬಸ್ಸೊಂದು ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ನಂ.1ಎ ನಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಯಾತ್ರಾತ್ರಿಗಳು ಗಾಯಗೊಂಡಿದ್ದರು. ಬಸ್ ಅಪಘಾತಕ್ಕೀಡಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಂರು ಕರ್ಫ್ಯೂ ನಡುವೆಯೂ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯಾತ್ರಾತ್ರಿಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 
ಅಪಘಾತಕ್ಕೀಡಾದ ಬಸ್ ನಲ್ಲಿ ಗಾಯಗೊಂಡಿದ್ದ ಯಾತ್ರಾತ್ರಿಗಳನ್ನು ಹೊರಗಡೆ ತಂದ ಸ್ಥಳೀಯರು ತಮ್ಮ ವಾಹನಗಳಲ್ಲೇ ಕೊಂಡ್ಯೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. 
ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಓರ್ವ ಪೊಲೀಸ್ ಸೇರಿದಂತೆ 33 ಪ್ರತಿಭಟನಾಕಾರರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಭೀಕರ ಅಪಘಾತ: ಯೂಟರ್ನ್‌ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್