ಸಾಂದರ್ಭಿಕ ಚಿತ್ರ 
ದೇಶ

ಐಎಸ್ ನಂಟು: ಶಂಕಿತ ಮಧ್ಯವರ್ತಿ ಮಹಾರಾಷ್ಟ್ರದಲ್ಲಿ ಬಂಧನ

ಐಎಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದಾನೆಂಬ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರ ಉಗ್ರ ನಿಗ್ರಹ ಘಟಕ...

ಪರ್ಭಾನಿ: ಐಎಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದಾನೆಂಬ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರ ಉಗ್ರ ನಿಗ್ರಹ ಘಟಕ (ಎಟಿಎಸ್) ಶುಕ್ರವಾರ ಬಂಧನಕ್ಕೊಳಪಡಿಸಿದೆ.

ಬಂಧಿತನಾಗಿರುವ ಶಂಕಿತ ವ್ಯಕ್ತಿ ರಂಜಾನ್ ಹಬ್ಬದ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದು, ದಾಳಿಗಾಗಿ ಸಿರಿಯಾದಿಂದ ಶಸ್ತ್ರಾಸ್ತ್ರಗಳನ್ನು ಪಡೆದಿದ್ದ ಎಂದು ಎಟಿಎಸ್ ಅಧಿಕಾರಿ ಮಣಿಕ್ ಬೆಂದ್ರೆ ಅವರು ಹೇಳಿದ್ದಾರೆ.

ಆನ್ ಲೈನ್ ನಲ್ಲಿ ಸಂಪರ್ಕಕ್ಕೆ ಬಂದಿದ್ದ ನಸೆರ್ ಬಿನ್ ಅಬುಬಕರ್ ಯಫೈ ಅವರು ಸಿರಿಯಾಗೆ ಹೋಗಲು ಪಾಸ್ ಪೋರ್ಟ್ ನ್ನು ನವೀಕರಿಸಿಕೊಟ್ಟಿದ್ದ ಎಂದು ವಿಚಾರಣೆ ವೇಳೆ ಶಂಕಿತ ವ್ಯಕ್ತಿ ಬಾಯ್ಬಿಟ್ಟಿದ್ದಾನೆಂದು ಅವರು ಹೇಳಿದ್ದಾರೆ.

ಅಬುಬಕರ್ ಯಫೈ ಗಡಿವಾನ್ ಪ್ರದೇಶದ ನಿವಾಸಿಯಾಗಿದ್ದು, ಸಿರಿಯಾದ ಫರೂಕ್ ಎಂಬುವವನೊಂದಿಗೆ ಚರ್ಚೆ ನಡೆಸಿದ್ದ. ಈತನನ್ನು ಅಧಿಕಾರಿಗಳು ಮುಂಬೈನಲ್ಲಿ ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ