ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಒಳನುಸುಳಿದ್ದ ಮೂವರು ಭಯೋತ್ಪಾದಕರನ್ನು ಗಡಿ ಭದ್ರತಾ ದಳ ಹಾಗೂ ಸ್ಥಳೀಯ ಪೊಲೀಸ್ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಹತ್ಯೆ ಮಾಡಿದ್ದಾರೆ.
ಕಾಶ್ಮೀರದ ಪೂಂಚ್ ಸಾವ್ ಜಿಯಾನ್ ಸೆಕ್ಟರ್ ಬಳಿ ಒಳನುಸುಳಿದ್ದ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭಾರತೀಯ ಯೋಧರು ಸಹ ಉಗ್ರರ ವಿರುದ್ಧ ಗುಂಡು ಹಾರಿಸಿದ್ದು ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಇನ್ನು ಕೆಲ ಉಗ್ರರು ಅಡಗಿರುವ ಶಂಕೆ ಹಿನ್ನೆಲೆ ಯೋಧರು ಶೋಧ ಕಾರ್ಯ ಮುಂದುವರೆಸಿದ್ದಾರೆ.