ಬಿಜೆಡಿ 
ದೇಶ

ಕಾಶ್ಮೀರಿ ಯುವಕರ ಮನಸ್ಥಿತಿಯನ್ನು ಪ್ರಧಾನಿ ಅರ್ಥ ಮಾಡಿಕೊಳ್ಳಬೇಕು: ಬಿಜೆಡಿ

ಗಲಭೆ ಪೀಡಿತ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಪಿಡಿಪಿ-ಬಿಜೆಪಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಒಡಿಶಾದ ಆಡಳಿತಾರೂಢ ಪಕ್ಷ ಬಿಜೆಡಿ...

ನವದೆಹಲಿ: ಗಲಭೆ ಪೀಡಿತ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಪಿಡಿಪಿ-ಬಿಜೆಪಿ ರಾಜ್ಯ ಸರ್ಕಾರ ಹಾಗೂ  ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಒಡಿಶಾದ ಆಡಳಿತಾರೂಢ ಪಕ್ಷ ಬಿಜೆಡಿ, ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಿ ಯುವಕರ ಮನಸ್ಸನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕೆಂದು ಅಭಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ, ಕಾನೂನು ಸುವ್ಯವಸ್ಥೆಗಿಂತಲೂ ಹೆಚ್ಚಿನದ್ದು, ಪರಿಸ್ಥಿತಿ ನಿಭಾಯಿಸಲು ಕೇಂದ್ರ- ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮ ಸೂಕ್ತವಾಗಿಲ್ಲ. ಕಾಶ್ಮೀರದಲ್ಲಿ ನಡೆಯಬಹುದಾದಂತಹ ಪ್ರತಿಭಟನೆಯನ್ನು ಊಹಿಸಲು ಗುಪ್ತಚರ ಇಲಾಖೆಯೂ ವಿಫಲವಾಗಿದೆ ಎಂದು ಬಿಜೆಡಿ ಸಂಸದ ಭಾರ್ತೃಹರಿ ಹೇಳಿದ್ದಾರೆ. ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಕೇಜ್ ಕಾಶ್ಮೀರಿ ಯುವಕರಿಗೆ ಸಮಾಧಾನಕಾರವಾಗಿಲ್ಲ ಎಂದೆನಿಸುತ್ತದೆ ಈ ಬಗ್ಗೆ ಗಮನ ಹರಿಸಿ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಿ ಯುವಕರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಭಾರ್ತೃಹರಿ ಕರೆ ನೀಡಿದ್ದಾರೆ. ಕಾಶ್ಮೀರದ ವಿಷಯದ ಬಗ್ಗೆ ಸೋಮವಾರ ನಡೆಯಲಿರುವ ಮುಂಗಾರು ಅಧಿವೇಶನದ ಕಲಾಪದಲ್ಲಿ ಚರ್ಚೆ ನಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ