ಕುಡಿದ ಅಮಲಿನಲ್ಲಿ ಬಾರ್ ಗರ್ಲ್ಸ್ ಜೊತೆ ಜೆಡಿಯು ಶಾಸಕ ಡ್ಯಾನ್ಸ್ ಮಾಡುತ್ತಿರುವುದು 
ದೇಶ

ಕುಡಿದ ಅಮಲಿನಲ್ಲಿ ಬಾರ್ ಗರ್ಲ್ಸ್ ಜೊತೆ ಜೆಡಿಯು ಶಾಸಕ ಡ್ಯಾನ್ಸ್: ವಿಡಿಯೋ ವೈರಲ್

ಕಠಿಣ ನಿಲುವು ತೆಗೆದುಕೊಂಡು ಬಿಹಾರ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ರನ್ನು ಅವರದ್ದೇ ಪಕ್ಷದ...

ಪಾಟ್ನ: ಕಠಿಣ ನಿಲುವು ತೆಗೆದುಕೊಂಡು ಬಿಹಾರ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ರನ್ನು ಅವರದ್ದೇ ಪಕ್ಷದ ಶಾಸರೊಬ್ಬರು ಮುಜುಗರಕ್ಕೊಳಗಾಗುವಂತೆ ಮಾಡಿದ್ದಾರೆ.

ಕುಡಿದ ಅಮಲಿನಲ್ಲಿದ್ದ ಜೆಡಿಯು ಶಾಸಕರೊಬ್ಬರು ಬಾರ್ ಹುಡುಗಿಯರ ಜೊತೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ.

ವಿಡಿಯೋ ಕುರಿತಂತೆ ಕೆಲ ಮಾಧ್ಯಮಗಳು ವರದಿ ಮಾಡಿದೆ. ವಿಡಿಯೋದಲ್ಲಿ ಕಂಡು ಬಂದಿರುವ ಪ್ರಕಾರ, ಬಾರ್ ಹುಡುಗಿಯರ ಜೊತೆ ಡ್ಯಾನ್ಸ್ ಮಾಡಿರುವುದು ಜೆಡಿಯು ಶಾಸಕ ಶ್ಯಾಮ್ ಬಹದ್ದೂರ್ ಸಿಂಗ್ ಎಂದು ಹೇಳಲಾಗುತ್ತಿದೆ. ಡ್ಯಾನ್ಸ್ ಮಾಡುವಾಗ ಶಾಸಕ ಕೆಲ ಅಶ್ಲೀಲವಾಗಿ ಸ್ಟೆಪ್ ಹಾಕಿದ್ದು, ಕುಡಿದ ಅಮಲಿನಲ್ಲಿರುವುದು ಎದ್ದು ಕಾಣುತ್ತಿದೆ.

ಬಿಹಾರ ರಾಜ್ಯದಲ್ಲಿ ಈಗಾಗಲೇ ಮದ್ಯ ನಿಷೇಧ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಕಾರಣವಾಗಿದ್ದ ನಿತೀಶ್ ಕುಮಾರ್ ಅವರು, ಇದೀಗ ಅವರ ಪಕ್ಷದ ಶಾಸಕರೊಬ್ಬರು ಈ ರೀತಿಯಾಗಿ ಕುಡಿದು ಬಾರ್ ಗರ್ಲ್ಸ್ ಜೊತೆ ಡ್ಯಾನ್ಸ್ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!