ದೇಶ

ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯೆ, ಸಚಿವೆ ನಿರ್ಮಲಾ ಸೀತಾರಾಮನ್

Srinivas Rao BV

ನವದೆಹಲಿ: ಜು.18 ರಿಂದ ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕರ್ನಾಟಕದಿಂದ ನಾಮಪತ್ರ ಸಲ್ಲಿಸಿದ್ದ ವೇಳೆ ಕನ್ನಡ ಕಲಿಯುವುದಾಗಿ ಹೇಳಿದ್ದ ನಿರ್ಮಲಾ ಸೀತಾರಾಮನ್ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕರ್ನಾಟಕದಿಂದ ಈ ಹಿಂದೆ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ವೆಂಕಯ್ಯ ನಾಯ್ಡು ಅವರನ್ನು ಪುನರಾಯ್ಕೆಗೊಳಿಸುವುದನ್ನು ವಿರೋಧಿಸಿ ವೆಂಕಯ್ಯ ನಾಯ್ಡು ಆಯ್ಕೆಯ ವಿರುದ್ದ ಅಭಿಯಾನ ತೀವ್ರಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಗೆಲ್ಲಿಸಿತ್ತು.

ನಾಮಪತ್ರ ಸಲ್ಲಿಸುವ ವೇಳೆ ಕನ್ನಡ ಭಾಷೆ ಅಲ್ಪ ಸ್ವಲ್ಪ ಬರುತ್ತದೆ. ಮುಂಬರುವ ದಿನಗಳಲ್ಲಿ ಕನ್ನಡ ಭಾಷೆ ಕಲಿತು ಸುಲಲಿತವಾಗಿ ಮಾತನಾಡುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು. ಅದರಂತೆಯೇ ಈಗ ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.

SCROLL FOR NEXT